ADVERTISEMENT

ಒಂದೇ ಹಗ್ಗದಲ್ಲಿ ಇಬ್ಬರು ವಿದ್ಯಾರ್ಥಿನಿಯರ ನೇಣು

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2014, 19:30 IST
Last Updated 5 ಸೆಪ್ಟೆಂಬರ್ 2014, 19:30 IST

ಸಿಲ್ಚಾರ್‌, ಅಸ್ಸಾಂ(ಐಎ­ಎನ್‌ಎಸ್‌): ಅಸ್ಸಾಂನ ಕರೀಮ್‌ಗಂಜ್‌ ಜಿಲ್ಲೆಯಲ್ಲಿ ಇಬ್ಬರು ಶಾಲಾ ಬಾಲಕಿಯರು ಒಂದೇ ಹಗ್ಗದ ಎರಡು ತುದಿಗಳನ್ನು ಬಳಸಿಕೊಂಡು ಮರ­ವೊಂದಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಈ ಘಟನೆ ಉತ್ತರ ಪ್ರದೇಶದ ಬದಾಯುನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ನೆನಪಿಸುವಂತಿದೆ. ‘ನೀಲಂಬಜಾರ್‌ ಪ್ರದೇಶದ ಶಾಲೆಯೊಂದರಲ್ಲಿ ಹತ್ತು ಹಾಗೂ ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದ ಈ ಇಬ್ಬರೂ ಬಾಲಕಿಯರು ಬುಧವಾರ ಸಂಜೆಯಿಂದ ಕಾಣೆಯಾಗಿದ್ದರು.

ಮೃತದೇಹಗಳನ್ನು ಮರಣೋತ್ತರ ಹಾಗೂ ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಇವುಗಳ ವರದಿ ಬಂದ ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿಯುತ್ತದೆ’ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.