ADVERTISEMENT

‘ಒಖಿ’ ಚಂಡಮಾರುತಕ್ಕೆ ಎಂಟು ಮಂದಿ ಸಾವು, 80ಕ್ಕೂ ಹೆಚ್ಚು ಮೀನುಗಾರರು ನಾಪತ್ತೆ

ಏಜೆನ್ಸೀಸ್
Published 1 ಡಿಸೆಂಬರ್ 2017, 5:34 IST
Last Updated 1 ಡಿಸೆಂಬರ್ 2017, 5:34 IST
‘ಒಖಿ’ ಚಂಡಮಾರುತಕ್ಕೆ ಎಂಟು ಮಂದಿ ಸಾವು, 80ಕ್ಕೂ ಹೆಚ್ಚು ಮೀನುಗಾರರು ನಾಪತ್ತೆ
‘ಒಖಿ’ ಚಂಡಮಾರುತಕ್ಕೆ ಎಂಟು ಮಂದಿ ಸಾವು, 80ಕ್ಕೂ ಹೆಚ್ಚು ಮೀನುಗಾರರು ನಾಪತ್ತೆ   

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ‘ಒಖಿ’ ಚಂಡಮಾರುತದಿಂದ ತಮಿಳುನಾಡು ಮತ್ತು ಕೇರಳದ ದಕ್ಷಿಣ ಕರಾವಳಿಗಳಲ್ಲಿ ಎರಡು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಎಂಟು ಮಂದಿ ಮೃತಪಟ್ಟಿದ್ದು, 80ಕ್ಕೂ ಹೆಚ್ಚು ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ.

ಸದ್ಯ 160 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಇದರ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸಮುದ್ರದಲ್ಲಿ ಭಾರಿ ಉಬ್ಬರ ಕಂಡುಬರಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಿದೆ.

ಮುಂದಿನ 24 ತಾಸು ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.