ADVERTISEMENT

ಒಮರ್‌ ನಿವಾಸದ ಮುಂದೆ ಗುಂಡು ಹಾರಿಸಿದ ಯೋಧ!

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2014, 19:30 IST
Last Updated 17 ನವೆಂಬರ್ 2014, 19:30 IST

ಶ್ರೀನಗರ (ಪಿಟಿಐ): ವ್ಯಾಪಕ ಭದ್ರತೆ ಇರುವ ಜಮ್ಮು ಮತ್ತು ಕಾಶ್ಮೀರ ಮುಖ್ಯ ಮಂತ್ರಿ ಒಮರ್ ಅಬ್ದುಲ್ಲಾ ಅವರ ನಿವಾಸದ ಎದುರು ಮಾನಸಿಕ ಕಾಯಿಲೆ ಯಿಂದ ಬಳಲುತ್ತಿದ್ದ ಬಿಎಸ್ಎಫ್‌  (ಗಡಿ ಭದ್ರತಾ ಪಡೆ) ಯೋಧರೊಬ್ಬರು 12 ಬಾರಿ ಗುಂಡು ಹಾರಿಸಿದ ಘಟನೆ ಸೋಮವಾರ ನಡೆದಿದೆ.

ಯೋಧ ಕೆಸ್ತೋ ಘೋಷ್‌ ಹಾರಿಸಿದ ಗುಂಡಿನಿಂದ ಯಾವುದೇ ಸಾವು–ನೋವು ಸಂಭವಿಸಿಲ್ಲ. ಯೋಧನು ಹಲವು ಸುತ್ತು ಗುಂಡು ಹಾರಿಸಿದಾಗ ಮುಖ್ಯಮಂತ್ರಿ ಒಮರ್ ಅವರು ನಿವಾಸ ದಲ್ಲಿರಲಿಲ್ಲ. ಚುನಾವಣೆಯ ಪ್ರಚಾರಕ್ಕಾಗಿ ಪ್ರವಾಸದಲ್ಲಿದ್ದರು.

‘ಗುಪ್ಕರ್ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಆಕಸ್ಮಿಕವಾಗಿ ಗುಂಡು ಹಾರಿದ ಘಟನೆ ನಡೆದಿದೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ’ ಎಂದು ಬಿಎಸ್‌ಎಫ್‌ ವಕ್ತಾರರೊಬ್ಬರು ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಒಮರ್‌, ‘ನನ್ನ ಭದ್ರತಾ ಸಿಬ್ಬಂದಿಯ ಮೇಲೆ ವಿಶ್ವಾಸ ಇದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.