ADVERTISEMENT

ಕಡ್ಡಾಯ ಯೋಗ ಕಲಿಕೆಗೆ ಆದೇಶಿದ ಆದಿತ್ಯನಾಥ ಯೋಗಿ

ಏಜೆನ್ಸೀಸ್
Published 4 ಏಪ್ರಿಲ್ 2017, 17:37 IST
Last Updated 4 ಏಪ್ರಿಲ್ 2017, 17:37 IST
ಕಡ್ಡಾಯ ಯೋಗ ಕಲಿಕೆಗೆ ಆದೇಶಿದ ಆದಿತ್ಯನಾಥ ಯೋಗಿ
ಕಡ್ಡಾಯ ಯೋಗ ಕಲಿಕೆಗೆ ಆದೇಶಿದ ಆದಿತ್ಯನಾಥ ಯೋಗಿ   

ನವ ದೆಹಲಿ: ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಯೋಗ ಶಿಕ್ಷಣ ಕಲಿಕೆಯನ್ನು ಕಡ್ಡಾಯಗೊಳಿಸಬೇಕು ಎಂದು ಮುಖ್ಯಮಂತ್ರಿ ಆದಿತ್ಯನಾಥ ಯೋಗಿ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಜತೆಗೆ ಶಾಲೆಗಳಲ್ಲಿ ಹೆಣ್ಣುಮಕ್ಕಳಿಗೆ ಸ್ವಯಂ ರಕ್ಷಣಾ ತರಬೇತಿಯನ್ನೂ ನೀಡಲು ಅಲ್ಲಿನ ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ‘ರಾಣಿ ಲಕ್ಷ್ಮೀಬಾಯಿ ಆತ್ಮ ರಕ್ಷಣಾ ಕಾರ್ಯಕ್ರಮ’ ಹಾಗೂ ‘ಯೋಗ ಶಿಕ್ಷಾ ಕಾರ್ಯಕ್ರಮ’ಗಳನ್ನು ಶಾಲೆಗಳಲ್ಲಿ ಕಡ್ಡಾಯಗೊಳಿಸಬೇಕು ಎಂದು ನಿರ್ಧರಿಸಲಾಗಿದೆ.  ಖಾಸಗಿ ಶಾಲೆಗಳಲ್ಲಿ ವಿಧಿಸಲಾಗುತ್ತಿರುವ ಹೆಚ್ಚುವರಿ ಶುಲ್ಕಗಳಿಗೂ ಕಡಿವಾಣ ಹಾಕಲು ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಿರುವ ಕುರಿತು ಸರ್ಕಾರದ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ADVERTISEMENT

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲೂ ಏಕರೂಪದ ಪಠ್ಯ ಕ್ರಮ ಜಾರಿ ಮಾಡಲು ಚಿಂತನೆ ನಡೆಸಲಾಗಿದೆ. ಉನ್ನತ ಶಿಕ್ಷಣ ಸಂಸ್ಥೆಗಳಿಗೆ ತಮ್ಮಲ್ಲಿ ಖಾಲಿಯಿರುವ ಶಿಕ್ಷಕ ಹುದ್ದೆಗಳನ್ನು ಶೀಘ್ರವೇ ಭರ್ತಿಮಾಡಬೇಕು ಎಂದು ಆದಿತ್ಯನಾಥ ಅವರು ಆದೇಶಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.