ADVERTISEMENT

ಕಪ್ಪುಹಣ: ಎಸ್‌ಐಟಿ ಮೊದಲ ಸಭೆ ಇಂದು

​ಪ್ರಜಾವಾಣಿ ವಾರ್ತೆ
Published 1 ಜೂನ್ 2014, 19:30 IST
Last Updated 1 ಜೂನ್ 2014, 19:30 IST

ನವದೆಹಲಿ (ಪಿಟಿಐ): ಅಕ್ರಮ ಹಣ ಮತ್ತು ವಿದೇಶಗಳಲ್ಲಿ ಭಾರತೀಯರು ಇರಿಸಿರುವ ಕಪ್ಪು ಹಣಕ್ಕೆ ಸಂಬಂಧಿಸಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮೊದಲ ಉನ್ನತ ಮಟ್ಟದ ಸಭೆ ಸೋಮವಾರ ನಡೆಯಲಿದೆ.

ಎಸ್‌ಐಟಿ ಅಧ್ಯಕ್ಷ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯ­ಮೂರ್ತಿ ಎಂ.ಬಿ.ಷಾ  ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆ ಯಲ್ಲಿ ಎಸ್‌ಐಟಿ ಉಪಾಧ್ಯಕ್ಷ  ನಿವೃತ್ತ ನ್ಯಾ. ಅರಿಜಿತ್‌ ಪಸಾಯತ್‌  ಹಾಗೂ ವಿವಿಧ ಏಜೆನ್ಸಿ ಮತ್ತು ಇಲಾಖೆಗಳ 11 ಹಿರಿಯ ಅಧಿಕಾರಿಗಳು ಭಾಗವಹಿಸ ಲಿದ್ದಾರೆ.

ಕಪ್ಪು ಹಣ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳು ಮತ್ತು ಈಗಾಗಲೇ ಕೈಗೊಂಡಿರುವ ಕ್ರಮ ಕುರಿತು ಸಭೆ ಚರ್ಚೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.  ದೇಶದ ಹತ್ತು ತನಿಖಾ ಸಂಸ್ಥೆಗಳ ಹಿರಿಯ ಅಧಿಕಾರಿಗಳು  ಎಸ್‌ಐಟಿ ತಂಡದ ಸದಸ್ಯರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.