ADVERTISEMENT

ಕಮಲನಾಥ್ ಹಂಗಾಮಿ ಸ್ಪೀಕರ್?

​ಪ್ರಜಾವಾಣಿ ವಾರ್ತೆ
Published 28 ಮೇ 2014, 10:36 IST
Last Updated 28 ಮೇ 2014, 10:36 IST

ನವದೆಹಲಿ (ಪಿಟಿಐ): ಸಂಸದೀಯ ವ್ಯವಹಾರಗಳ ಮಾಜಿ ಸಚಿವರೂ ಆಗಿರುವ ಕಾಂಗ್ರೆಸ್‌ನ ಹಿರಿಯ ಮುಖಂಡ ಕಮಲನಾಥ್ ಅವರು ನೂತನ ಲೋಕಸಭೆಗೆ ಹಂಗಾಮಿ ಸ್ಪೀಕರ್‌ ಆಗಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.

ಕೆಳಮನೆಯ ಅತ್ಯಂತ ಹಿರಿಯ ಸದಸ್ಯರಾಗಿರುವ ಕಮಲನಾಥ್ ಅವರನ್ನು ಹಂಗಾಮಿ ಸ್ಪೀಕರ್‌ ಆಗಿ ನೇಮಿಸುವಂತೆ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರಿಗೆ ಸರ್ಕಾರ ಶಿಫಾರಸು ಮಾಡಿದೆ ಎಂದು ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ನೂತನ ಸ್ಪೀಕರ್‌ಗಾಗಿ ಚುನಾವಣೆ ನಡೆಯುವ ವರೆಗೂ ಹಂಗಾಮಿ ಸ್ಪೀಕರ್‌ ಅವರು ಲೋಕಸಭಾಧ್ಯಕ್ಷರ ಕಾರ್ಯಗಳನ್ನು ನಿರ್ವಹಿಸುತ್ತಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.