ADVERTISEMENT

ಕಮಲ್‌ನಾಥ್ ಹಂಗಾಮಿ ಸ್ಪೀಕರ್

​ಪ್ರಜಾವಾಣಿ ವಾರ್ತೆ
Published 4 ಜೂನ್ 2014, 9:30 IST
Last Updated 4 ಜೂನ್ 2014, 9:30 IST

ನವದೆಹಲಿ (ಪಿಟಿಐ/ಐಎಎನ್‌ಎಸ್): 16ನೇ ಲೋಕಸಭೆಗೆ ಹಂಗಾಮಿ ಸ್ಪೀಕರ್  ಆಗಿ ಹಿರಿಯ ಕಾಂಗ್ರೆಸ್ ಮುಖಂಡ ಕಮಲ್‌ನಾಥ್ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪ್ರಮಾಣ ವಿಧಿ ಬೋಧಿಸಿದರು.

ಹಿಂದಿನ ಯುಪಿಎ ಸರ್ಕಾರದಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿದ್ದ ಕಮಲ್‌ನಾಥ್ ಅವರು  ಮಧ್ಯಪ್ರದೇಶದ ಚಿಂದ್ವಾರ್ ಕ್ಷೇತ್ರದಿಂದ 9ನೇ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿದ್ದಾರೆ.

ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯುವವರೆಗೆ ಕಮಲ್‌ನಾಥ್ ಅವರು ಲೋಕಸಭೆ ಅಧಿವೇಶನದ ಜವಾಬ್ದಾರಿ ನೋಡಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.