ADVERTISEMENT

ಕಲಾಂಗೆ ರಾಷ್ಟ್ರಪತಿ, ಪ್ರಧಾನಿ ಅಂತಿಮ ನಮನ

​ಪ್ರಜಾವಾಣಿ ವಾರ್ತೆ
Published 28 ಜುಲೈ 2015, 9:30 IST
Last Updated 28 ಜುಲೈ 2015, 9:30 IST

ನವದೆಹಲಿ (ಪಿಟಿಐ): ಸೋಮವಾರ ವಿಧಿವಶರಾದ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತಿಮ ನಮನ ಸಲ್ಲಿಸಿದರು.

ಶಿಲ್ಲಾಂಗ್‌ನಿಂದ ಕಲಾಂ ಅವರ ಪಾರ್ಥಿವ ಶರೀರವನ್ನು ಭಾರತೀಯ ವಾಯು ಸೇನೆಯ ವಿಶೇಷ ವಿಮಾನದಲ್ಲಿ ಮಧ್ಯಾಹ್ನ 12.30ರ ಸುಮಾರಿಗೆ ಇಲ್ಲಿಗೆ ತರಲಾಯಿತು.

ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್‌ ಜಂಗ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರೂ ಕಲಾಂ ಅವರಿಗೆ ಅಂತಿಮ ದರುಶನ ಪಡೆದರು.

ADVERTISEMENT

ದೆಹಲಿಯ 10 ರಾಜಾಜೀ ಮಾರ್ಗದಲ್ಲಿ ಕಲಾಂ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.