ADVERTISEMENT

ಕಲ್ಲಿದ್ದಲು ಗಣಿ ನಿಕ್ಷೇಪ ಹಂಚಿಕೆ ಹಗರಣ: ಮಾಜಿ ಕಾರ್ಯದರ್ಶಿ ಗುಪ್ತಾ ಸೇರಿ ನಾಲ್ವರು ತಪ್ಪಿತಸ್ಥರು

ಪಿಟಿಐ
Published 19 ಮೇ 2017, 7:14 IST
Last Updated 19 ಮೇ 2017, 7:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕಲ್ಲಿದ್ದಲು ಗಣಿ ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಕಲ್ಲಿದ್ದಲು ಸಚಿವಾಲಯದ ಮಾಜಿ ಕಾರ್ಯದರ್ಶಿ ಎಚ್‌.ಸಿ. ಗುಪ್ತಾ ಅವರನ್ನು ತಪ್ಪಿಸ್ಥ ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಹಗರಣ ನಡೆದಿದೆ ಎನ್ನಲಾದ ಅವಧಿಯಲ್ಲಿ ಕಲ್ಲಿದ್ದಲು ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿದ್ದ ಕೆ.ಎಸ್‌. ಕ್ರೊಫಾ, ನಿರ್ದೇಶಕರಾಗಿದ್ದ ಕೆ.ಸಿ. ಸಮರಿಯಾ ಮತ್ತು ಕೆಎಸ್‌ಎಸ್‌ಪಿಎಲ್ ಕಂಪೆನಿಯ ಎಂಡಿ ಪವನ್‌ಕುಮಾರ್ ಅಹ್ಲುವಾಲಿಯಾ ಅವರನ್ನೂ ತಪ್ಪಿಸ್ಥರು ಎಂದು ಸಿಬಿಐ ವಿಶೇಷ ನ್ಯಾಯಾಧೀಶ ಭಾರತ್ ಪರಾಷರ ಅವರು ಘೋಷಿಸಿದರು.

ಮಧ್ಯಪ್ರದೇಶದ ಥೆಸ್‌ಗೊರಾ–ಬಿ ಮತ್ತು ರುದ್ರಪುರಿ ಕಲ್ಲಿದ್ದಲು ಗಣಿಯನ್ನು ಕೆಎಸ್‌ಎಸ್‌ಪಿಎಲ್ ಕಂಪೆನಿಗೆ ಹಂಚಿಕೆ ಮಾಡಿದ ಪ್ರಕರಣ ಇದಾಗಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಮೇ 22ರಂದು ಪ್ರಕಟಿಸಲಿದೆ.

ADVERTISEMENT

ಪ್ರಕರಣಕ್ಕೆ ಸಂಬಂಧಿಸಿ, ಚಾರ್ಟಡ್ ಅಕೌಂಟೆಂಟ್ ಅಮಿತ್ ಗೋಯೆಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.