ADVERTISEMENT

ಕಾವೇರಿ ನಿರ್ವಹಣಾ ಮಂಡಳಿ ಪ್ರಸ್ತಾವನೆಯಿಲ್ಲ

​ಪ್ರಜಾವಾಣಿ ವಾರ್ತೆ
Published 7 ಜೂನ್ 2014, 13:12 IST
Last Updated 7 ಜೂನ್ 2014, 13:12 IST

ಬೆಂಗಳೂರು (ಪಿಟಿಐ): ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವ ಯಾವುದೇ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತ್ ಕುಮಾರ್ ಶನಿವಾರ ಹೇಳಿದರು.

`ಇಂದು ಬೆಳಿಗ್ಗೆ ಕೇಂದ್ರ ಜಲ ಸಂಪನ್ಮೂಲ ಸಚಿವೆ ಸಾದ್ವಿ ಉಮಾ ಭಾರತಿ ಅವರೊಂದಿಗೆ ಮಾತನಾಡಿರುವೆ ಕೇಂದ್ರ ಜಲಸಂಪನ್ಮೂಲ ಇಲಾಖೆಯಲ್ಲಿ ಈ ರೀತಿಯ ಯಾವುದೇ ಪ್ರಸ್ತಾವನೆ ಇಲ್ಲ' ಎಂದು ಅನಂತ್ ಕುಮಾರ್ ಅವರು ಸುದ್ದಿಗಾರರಿಗೆ ತಿಳಿಸಿದರು.

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಕಾವೇರಿ ನಿರ್ವಹಣಾ ಮಂಡಳಿಯನ್ನು (ಸಿಎಂಬಿ) ರಚಿಸುವಂತೆ ಒತ್ತಾಯಿಸಿದ್ದರು.

ಏತನ್ಮಧ್ಯೆ, ಮೋದಿ ಅವರನ್ನು ಭೇಟಿ ಮಾಡಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಿಎಂಬಿಗೆ ವಿರೋಧ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.