ADVERTISEMENT

ಕಾಶ್ಮೀರ: ನಾಲ್ಕು ಜಿಲ್ಲೆಗಳಲ್ಲಿ ಕರ್ಫ್ಯೂ ತೆರವು

​ಪ್ರಜಾವಾಣಿ ವಾರ್ತೆ
Published 23 ಜುಲೈ 2016, 7:29 IST
Last Updated 23 ಜುಲೈ 2016, 7:29 IST
ಕಾಶ್ಮೀರ: ನಾಲ್ಕು ಜಿಲ್ಲೆಗಳಲ್ಲಿ ಕರ್ಫ್ಯೂ ತೆರವು
ಕಾಶ್ಮೀರ: ನಾಲ್ಕು ಜಿಲ್ಲೆಗಳಲ್ಲಿ ಕರ್ಫ್ಯೂ ತೆರವು   

ಶ್ರೀನಗರ (ಪಿಟಿಐ): ಹಿಜ್ಬುಲ್‌ ಮುಜಾಹಿದೀನ್‌ ಕಮಾಂಡರ್‌ ಬುರ್ಹಾನ್‌ ವಾನಿ ಹತ್ಯೆಯ ನಂತರ ಕಾಶ್ಮೀರದಲ್ಲಿ ನಡೆಯುತ್ತಿದ್ದ ಹಿಂಸಾಚಾರ ಹತೋಟಿಗೆ ಬಂದಿದ್ದು, ಶ್ರೀನಗರ ಕೆಲವು ಭಾಗಗಳು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಕರ್ಫ್ಯೂ ತೆರವುಗೊಳಿಸಲಾಗಿದೆ.

ಅನಂತನಾಗ್, ಕುಪ್ವಾರ, ಪುಲ್ವಾಮಾ ಸೇರಿದಂತೆ ಕಾಶ್ಮೀರ ಕಣಿವೆಯ ಇತರ ಜಿಲ್ಲೆಗಳು ಮತ್ತು ಎಂಟು ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಮುಂದುವರೆಯಲಿದೆ ಪೊಲೀಸರು ಹೆಳಿದ್ದಾರೆ.

ಕಾಶ್ಮೀರ ಕಣಿವೆಯಲ್ಲಿ ಸದ್ಯ ಪರಿಸ್ಥಿತಿ ಶಾಂತವಾಗಿದೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಇಲ್ಲಿಗೆ ಭೇಟಿ ನೀಡಿ ನಾಗರಿಕರು, ರಾಜಕೀಯ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.