ADVERTISEMENT

ಕಿರಣ್‌ ಕುಮಾರ್‌ ರೆಡ್ಡಿ ಸ್ಪರ್ಧೆ ಇಲ್ಲ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2014, 19:30 IST
Last Updated 19 ಏಪ್ರಿಲ್ 2014, 19:30 IST

ಹೈದರಾಬಾದ್‌  (ಐಎಎನ್‌ಎಸ್‌): ಜೈ ಸಮೈಕ್ಯಾಂಧ್ರ ಪಕ್ಷದ (ಜೆಎಸ್‌ಪಿ) ಮುಖ್ಯಸ್ಥರಾದ ಎನ್‌.ಕಿರಣ್‌ ಕುಮಾರ್‌ ರೆಡ್ಡಿ ಅವರು ಈ ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸದೇ ಇರಲು ನಿರ್ಧರಿಸಿದ್ದಾರೆ.

ತಮ್ಮ ಬದಲಿಗೆ ಸಹೋದರ ಕಿಶೋರ್‌ ಕುಮಾರ್‌ ರೆಡ್ಡಿ ಅವರನ್ನು ಪೆಲಿರು ವಿಧಾನಸಭೆ ಕ್ಷೇತ್ರದಿಂದ ಕಣಕ್ಕಿಳಿಸಿದ ಅವರು, ‘ನಾನು ರಾಜ್ಯದಾದ್ಯಂತ ಪಕ್ಷದ ಪರ ಪ್ರಚಾರ ಮಾಡಲಿದ್ದೇನೆ’ ಎಂದು ತಿಳಿಸಿದ್ದಾರೆ.

ಕಿರಣ್‌ ಕುಮಾರ್‌ ರೆಡ್ಡಿ ಅವರು ಪೆಲಿರು ಕ್ಷೇತ್ರದಿಂದ ಸ್ಪರ್ಧಿಸುವುದು ಎಂದು ಮೊದಲು ನಿರ್ಧಾರವಾಗಿತ್ತು. ಆದರೆ ಅವರ ದಿಢೀರ್‌ ನಿರ್ಧಾರ ಅಚ್ಚರಿ ಉಂಟುಮಾಡಿದೆ.

ಆಂಧ್ರ ಪ್ರದೇಶದ ಮುಖ್ಯಮಂತ್ರಿ­ಯಾಗಿದ್ದ ಕಿರಣ್‌ ಕುಮಾರ್‌ ರೆಡ್ಡಿ, ಪ್ರತ್ಯೇಕ ತೆಲಂಗಾಣ ರಚನೆ ನಿರ್ಧಾರವನ್ನು ಖಂಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ
ನೀಡಿ, ಕಾಂಗ್ರೆಸ್‌ ಪಕ್ಷದಿಂದ ಹೊರ ಬಂದು ಮಾರ್ಚ್‌ನಲ್ಲಿ ಹೊಸ ಪಕ್ಷ ಸ್ಥಾಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.