ADVERTISEMENT

ಕುಂಭದ್ರೋಣ ಮಳೆ: ಕಾಶ್ಮೀರದಲ್ಲಿ ಪ್ರವಾಹ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2015, 7:16 IST
Last Updated 30 ಮಾರ್ಚ್ 2015, 7:16 IST

ಶ್ರೀನಗರ (ಪಿಟಿಐ): ಕಾಶ್ಮೀರ ಕಣಿವೆಯ ವಿವಿಧ ಪ್ರದೇಶಗಳಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಝೇಲಂ ನದಿಯ ನೀರು ಅಪಾಯದ ಮಟ್ಟಕ್ಕೆ ತಲುಪಿದ್ದು, ಪ್ರವಾಹದ ಸ್ಥಿತಿ ತಲೆದೋರಿದೆ.ಕಾಶ್ಮೀರದ ಬುದ್‌ಗಾಂ ಜಿಲ್ಲೆಯಲ್ಲಿ ಕಟ್ಟಡ ಕುಸಿದು 8 ಮಂದಿ ಮೃತಪಟ್ಟಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕಾಶ್ಮೀರದ ಶ್ರೀನಗರ ಮತ್ತು ಸಂಗಮ ಪ್ರದೇಶದ ನಿವಾಸಿಗಳಿಗೆ ಸುರಕ್ಷಿತವಾದ ಪ್ರದೇಶಗಳಿಗೆ ತೆರಳಲು ಸೂಚನೆ ನೀಡಲಾಗಿದೆ.  ಇಲ್ಲಿಂದ ನೂರಾರು ಜನರನ್ನು ಸ್ಥಳಾಂತರಿಸಲಾಗಿದೆ. ಕೆಲವೆಡೆ ಭೂ ಕುಸಿತ ಉಂಟಾಗಿದೆ. ಅನೇಕ ಕಟ್ಟಡಗಳು ಹಾನಿಗೊಳಗಾಗಿವೆ.

ಸೋಮವಾರ ಬೆಳಿಗ್ಗೆ ಸಂಗಮ್‌ನಲ್ಲಿ  ಝೇಲಂ ನದಿ ನೀರು ಅಪಾಯಕಾರಿ ಮಟ್ಟ 22.4 ಅಡಿಗೆ ಏರಿದೆ. ಶ್ರೀನಗರ–ಜಮ್ಮು ರಾಷ್ಟ್ರೀಯ ಹೆದ್ದಾರಿ ಬಂದ್‌, ಇನ್ನೂ ಆರು ದಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

100 ಸಿಬ್ಬಂದಿ ಒಳಗೊಂಡ ಎರಡು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ತಂಡಗಳನ್ನು ಕಾಶ್ಮೀರಕ್ಕೆ ಕಳುಹಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.