ADVERTISEMENT

ಕುಲಾಂತರಿ ಸಾಸಿವೆ: ನಿರ್ಧಾರ ಮುಂದಕ್ಕೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2016, 19:30 IST
Last Updated 5 ಫೆಬ್ರುವರಿ 2016, 19:30 IST

ನವದೆಹಲಿ (ಪಿಟಿಐ): ಕುಲಾಂತರಿ ಸಾಸಿವೆಯ ವಾಣಿಜ್ಯ ಕೃಷಿಗೆ ಅವಕಾಶ ನೀಡುವ ಸಂಬಂಧ ಎಲ್ಲ ಅಂಶಗಳನ್ನೂ ಪರಿಗಣಿಸಿ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್‌ ಜಾವಡೇಕರ್‌ ತಿಳಿಸಿದರು.

ಕುಲಾಂತರಿ ತಂತ್ರಜ್ಞಾನ ಅನುಮೋದನಾ ಸಮಿತಿ (ಜಿಇಎಸಿ) ಸಭೆ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು.

‘ಸಾರ್ವಜನಿಕರ ಆರೋಗ್ಯದ ವಿಷಯದಲ್ಲಿ ನಾವು ಯಾವುದೇ ರಾಜಿಗೆ ಸಿದ್ಧರಿಲ್ಲ. ಕುಲಾಂತರಿ ಸಾಸಿವೆ ಕುರಿತ ಎಲ್ಲ ಆಯಾಮಗಳನ್ನು ಪರಿಶೀಲಿಸಿದ ಬಳಿಕ ತೀರ್ಮಾನ ಕೈಗೊಳ್ಳುತ್ತೇವೆ. ಇಂದಿನ ಸಭೆಯಲ್ಲಿ ಅನುಮತಿಗೆ ನಿರ್ಧರಿಸಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

‘ಸಾವಯವ ಪದ್ಧತಿಯಲ್ಲಿ ಸಾಸಿವೆ ಬೆಳೆಯುವುದು ಉತ್ತಮ. ಅದೇ ಕಾಲಕ್ಕೆ ಜೈವಿಕ ತಂತ್ರಜ್ಞಾನದ ಬಳಕೆ ಕುರಿತೂ ಯೋಚಿಸಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.