ಜೋಧಪುರ್ (ಪಿಟಿಐ) : ಶೂಟಿಂಗ್ ವೇಳೆ ಕೃಷ್ಣ ಮೃಗ ಬೇಟೆಗೆ ಸಂಬಂಧಿಸಿದ ಶಸ್ತ್ರಾಸ್ತ್ರ ಕಾಯ್ದೆ (ಪರವಾನಗಿ ಅವಧಿ ಮುಗಿದ ನಂತರವೂ ಶಸ್ತ್ರಾಸ್ತ್ರ ಇಟ್ಟುಕೊಳ್ಳುವುದು ಹಾಗೂ ಬಳಸುವುದು) ಪ್ರಕರಣದಲ್ಲಿ ರಾಜಸ್ಥಾನ ಹೈಕೋರ್ಟ್ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಸೋಮವಾರ ಖುಲಾಸೆಗೊಳಿಸಿದೆ.
ಏನಿದು ಪ್ರಕರಣ?: 1998ರಲ್ಲಿ ಹಮ್ ಸಾಥ್ ಸಾಥ್ ಹೈ ಸಿನಿಮಾ ಶೂಟಿಂಗ್ ವೇಳೆ ಜೋಧ್ಪುರದ ಬಳಿಯಲ್ಲಿರುವ ಕಂಕಣಿ ಗ್ರಾಮದಲ್ಲಿ ಸಲ್ಮಾನ್ ಖಾನ್ ಕೃಷ್ಣಮೃಗ ಬೇಟೆಯಾಡಿದ್ದರು. ರಕ್ಷಿತ ಅರಣ್ಯ ಪ್ರದೇಶದಲ್ಲಿ ಕೃಷ್ಣಮೃಗ ಬೇಟೆಯಾಡಿದ್ದ ಸಲ್ಮಾನ್ ಖಾನ್ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಈಗಾಗಲೇ ಪ್ರಕರಣದಲ್ಲಿ ಸಲ್ಮಾನ್ ಖಾನ್ 2006 ರ ಏಪ್ರಿಲ್ ಮತ್ತು 2007ರ ಆಗಸ್ಟ್ನಲ್ಲಿ ಜೈಲುವಾಸ ಅನುಭವಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.