ADVERTISEMENT

ಕೆಸಿಆರ್‌: ದಶಕದ ನಂತರ ವಿಧಾನಸಭೆ ಪ್ರವೇಶ

​ಪ್ರಜಾವಾಣಿ ವಾರ್ತೆ
Published 9 ಜೂನ್ 2014, 19:30 IST
Last Updated 9 ಜೂನ್ 2014, 19:30 IST

ಹೈದರಾಬಾದ್‌: ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್‌ಎಸ್‌) ನಾಯಕ ಹಾಗೂ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರು ದಶಕದ ನಂತರ ಸೋಮವಾರ ಮೊದಲ ಬಾರಿ ವಿಧಾನಸಭೆಯನ್ನು ಪ್ರವೇಶಿಸಿದರು.

ರಾವ್‌ ವಿಧಾನಸಭೆ ಪ್ರವೇಶಿಸುತ್ತಿದ್ದಂತೆಯೇ ಟಿಆರ್‌ಎಸ್‌ ಶಾಸಕರು ಎದ್ದು ನಿಂತು ಗೌರವ ಸಲ್ಲಿಸಿದರು. ಜೈ ತೆಲಂಗಾಣ ಎಂದು ಘೋಷಣೆ ಕೂಗಿದರು. 2004ರಲ್ಲಿ ಸಂಸದರಾಗಿ ಆಯ್ಕೆಯಾದ ನಂತರ ಅವರು ವಿಧಾನಸಭೆಯನ್ನು ಪ್ರವೇಶಿಸಿರ­ಲಿಲ್ಲ. ಅಧಿವೇಶನ ಆರಂಭದಲ್ಲಿ ತೆಲಂಗಾಣ ಪ್ರತ್ಯೇಕ ರಾಜ್ಯ­ಕ್ಕಾಗಿ ಪ್ರಾಣತೆತ್ತ ಹುತಾತ್ಮರಿಗೆ ಗೌರವ ಸಲ್ಲಿಸಲಾಯಿತು.

ಕೆ. ಜನಾರೆಡ್ಡಿ ಅವರು  ಹಂಗಾಮಿ ಸ್ಪೀಕರ್‌ ಆಗಿ ಅಧಿಕಾರ ಸ್ವೀಕರಿಸಿದ್ದು, ಮಂಗಳವಾರ ಸ್ಪೀಕರ್‌ ಮತ್ತು ಡೆಪ್ಯುಟಿ ಸ್ಪೀಕರ್‌ ಆಯ್ಕೆ ನಡೆಯಲಿದೆ. ಜೂನ್‌ 11ರಂದು ರಾಜ್ಯಪಾಲ ಇ.ಎಸ್‌.ಎಲ್‌ ನರಸಿಂಹನ್‌ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.