ADVERTISEMENT

ಕೇಂದ್ರದಿಂದ ಅಗತ್ಯ ನೆರವಿನ ಭರವಸೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2015, 9:01 IST
Last Updated 30 ಮಾರ್ಚ್ 2015, 9:01 IST

ನವದೆಹಲಿ (ಪಿಟಿಐ): ಪ್ರವಾಹ ಪೀಡಿತ ಜಮ್ಮು– ಕಾಶ್ಮೀರಕ್ಕೆ ಎಲ್ಲ ರೀತಿಯ ನೆರವು ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.

ಪರಿಹಾರ ಕಾರ್ಯಗಳ ಮೇಲುಸ್ತುವಾರಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಮುಖ್ತಾರ್‌ ಅಬ್ಬಾಸ್‌ ನಕ್ವಿ ಅವರನ್ನು ಕಣಿವೆ ರಾಜ್ಯಕ್ಕೆ ಕಳಿಸಿದ್ದಾರೆ.

ನಕ್ವಿ  ಅವರು ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಲಿದ್ದಾರೆ.

ADVERTISEMENT

‘ಪ್ರವಾಹದಿಂದ ತತ್ತರಿಸಿರುವ ಜಮ್ಮು– ಕಾಶ್ಮೀರಕ್ಕೆ ಎಲ್ಲ ರೀತಿಯ ನೆರವು ನೀಡಲು ಕೇಂದ್ರ ಸರ್ಕಾರ ಬದ್ಧವಿದೆ’ ಎಂದು ನಕ್ವಿ ತಿಳಿಸಿದ್ದಾರೆ.

ಭಾರತೀಯ ಸೇನೆಯ ರಕ್ಷಣಾ ತಂಡಗಳು ಪರಿಹಾರ ಕಾರ್ಯದಲ್ಲಿ ತೊಡಗಿದ್ದು, ಪ್ರವಾಹಕ್ಕೆ ಸಿಲುಕಿರುವವರನ್ನು ಸುರಕ್ಷಿತ ಪ್ರದೇಶಗಳಿಗೆ ಕರೆದೊಯ್ಯುವ ಕಾರ್ಯ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.