ADVERTISEMENT

ಕೇಜ್ರಿವಾಲ್‌ಗೆ ಕಪಾಳಮೋಕ್ಷ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2014, 14:32 IST
Last Updated 4 ಏಪ್ರಿಲ್ 2014, 14:32 IST

ನವದೆಹಲಿ (ಪಿಟಿಐ): ಎಎಪಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್‌ ಅವರಿಗೆ ರೋಡ್‌ಶೋ ನಡೆಸುವ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ್ದಾರೆ.

ಇಲ್ಲಿನ ದಕ್ಷಿಣ ಪುರಿ ಪ್ರದೇಶದಲ್ಲಿ ಪಕ್ಷದ ಪ್ರಚಾರದ ವೇಳೆ ಬೆಂಬಲಿಗರಿಗೆ ಹಸ್ತಲಾಘವ ನೀಡುವಾಗ ಅಪರಿಚಿತ ವ್ಯಕ್ತಿ ಕಪಾಳಮೋಕ್ಷ ಮಾಡಿದ್ದಾರೆ. ಕೂಡಲೇ ಅಲ್ಲಿ ನೆರದಿದ್ದ ಬೆಂಬಲಿಗರು ಆ ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಕಪಾಳಮೋಕ್ಷ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಕುರಿತು ಕೇಜ್ರಿವಾಲ್‌ ಆ ವ್ಯಕ್ತಿಯನ್ನು ಕ್ಷಮಿಸಿರುವುದಾಗಿ ತಿಳಿಸಿದ್ದಾರೆಂದು ಎಎಪಿಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT