ADVERTISEMENT

ಕೇಜ್ರಿವಾಲ್‌ ಪುತ್ರಿಗೆ ಶೇ 96 ಅಂಕ

​ಪ್ರಜಾವಾಣಿ ವಾರ್ತೆ
Published 29 ಮೇ 2014, 19:30 IST
Last Updated 29 ಮೇ 2014, 19:30 IST

ನವದೆಹಲಿ (ಐಎಎನ್‌ಎಸ್): ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ ಅವರ ಪುತ್ರಿ ಹರ್ಷಿತಾ ಕೇಜ್ರಿ­ವಾಲ್ ಗುರುವಾರ  ಪ್ರಕಟವಾದ ಸಿಬಿಎಸ್‌ಸಿ ದ್ವಿತೀಯ ಪಿಯುಸಿಯಲ್ಲಿ ಶೇ 96 ಅಂಕ ಗಳಿಸಿದ್ದಾಳೆ.

ಉತ್ತರ ಪ್ರದೇಶದ ನೋಯ್ಡಾದ ಡೆಲ್ಲಿ ಪಬ್ಲಿಕ್‌ ಸ್ಕೂಲ್‌ನ ವಿದ್ಯಾರ್ಥಿನಿಯಾಗಿರುವ ಹರ್ಷಿತಾ, ಭೌತ­ಶಾಸ್ತ್ರ ವಿಷಯದಲ್ಲಿ ಶೇ 99 ಅಂಕಗಳನ್ನು ಗಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿ­ಯರು ಮೇಲುಗೈ ಸಾಧಿಸಿದ್ದಾರೆ.

ಅತ್ಯಾಚಾರ, ಕೊಲೆ: ಇಬ್ಬರ ಬಂಧನ
ಬದೌನ್‌ (ಉತ್ತರಪ್ರದೇಶ):
ದಲಿತ ಸಮುದಾಯಕ್ಕೆ ಸೇರಿದ ಸಹೋದರಿಯರಿಬ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಪೊಲೀಸ್‌ ಸಿಬ್ಬಂದಿ ಸೇರಿ ಇಬ್ಬರನ್ನು ಬಂಧಿಸಲಾಗಿದ್ದು, ಮೂವರು ಪೊಲೀಸ್‌ ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಸಹೋದರಿಯರಿಬ್ಬರನ್ನು ಹತ್ಯೆ ಮಾಡುವುದಕ್ಕೆ ಮುನ್ನ ಅತ್ಯಾಚಾರ ಎಸಗಿರುವುದು ಮರಣೋತ್ತರ ಪರೀಕ್ಷೆಯಿಂದ ದೃಢಪಟ್ಟಿದೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಅತುಲ್‌ಕುಮಾರ್‌ ಸಕ್ಸೇನಾ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.