ADVERTISEMENT

ಕೋಮು ಸಾಮರಸ್ಯ ಕದಡಿದರೆ ಕಠಿಣ ಕ್ರಮ: ರಾಜನಾಥ್‌

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2015, 6:51 IST
Last Updated 7 ಅಕ್ಟೋಬರ್ 2015, 6:51 IST

ನವದೆಹಲಿ (ಪಿಟಿಐ): ದೇಶದಲ್ಲಿ ಕೋಮು ಸಾಮರಸ್ಯ ಕದಡಲು ಪ್ರಯತ್ನಿಸುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

ಉತ್ತರ ಪ್ರದೇಶದ ದಾದ್ರಿ ಎಂಬ ಹಳ್ಳಿಯಲ್ಲಿ ಗೋಮಾಂಸ ಸೇವಿಸಿದ್ದಾರೆಂದು ಶಂಕಿಸಿ ವ್ಯಕ್ತಿಯೊಬ್ಬರನ್ನು ಕೊಂದು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಬುಧವಾರ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಅವರು ಈ ರೀತಿ ಉತ್ತರ ನೀಡಿದರು.

ಕೇಂದ್ರ ಸರ್ಕಾರವೇ ಇರಬಹುದು, ರಾಜ್ಯ ಸರ್ಕಾರವೇ ಇರಬಹುದು, ದೇಶದಲ್ಲಿ ಕೋಮು ಗಲಭೆಗೆ ಪ್ರಚೋದನೆ ನೀಡುವ ವ್ಯಕ್ತಿ, ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಾಗುವುದು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.