ADVERTISEMENT

‘ಗೋ ರಕ್ಷಕ ಗುಂಪುಗಳಿಗೆ ಸರ್ಕಾರದ ಬೆಂಬಲವಿಲ್ಲ’

ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರದ ಹೇಳಿಕೆ

ಏಜೆನ್ಸೀಸ್
Published 21 ಜುಲೈ 2017, 10:22 IST
Last Updated 21 ಜುಲೈ 2017, 10:22 IST
‘ಗೋ ರಕ್ಷಕ ಗುಂಪುಗಳಿಗೆ ಸರ್ಕಾರದ ಬೆಂಬಲವಿಲ್ಲ’
‘ಗೋ ರಕ್ಷಕ ಗುಂಪುಗಳಿಗೆ ಸರ್ಕಾರದ ಬೆಂಬಲವಿಲ್ಲ’   

ನವದೆಹಲಿ: ‘ಗೋ ರಕ್ಷಕ ಗುಂಪುಗಳಿಗೆ ಸರ್ಕಾರದ ಯಾವುದೇ ರೀತಿಯ ಬೆಂಬಲವಿಲ್ಲ. ಕಾನೂನಿನ ಪ್ರಕಾರ ದೇಶದ ಯಾವ ರಾಜ್ಯಗಳಲ್ಲೂ ಗೋ ರಕ್ಷಕ ಗುಂಪುಗಳಿಗೆ ಜಾಗವಿಲ್ಲ’ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಶುಕ್ರವಾರ ತಿಳಿಸಿದೆ.

ಕೇಂದ್ರ ಸರ್ಕಾರದ ಈ ಹೇಳಿಕೆಯನ್ನು ಆಲಿಸಿದ ಬಳಿಕ ಸುಪ್ರೀಂಕೋರ್ಟ್‌ನ ವಿಭಾಗೀಯ ಪೀಠವು, ಗೋ ರಕ್ಷಕ ಗುಂಪುಗಳನ್ನು ನಿಯಂತ್ರಿಸಲು ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ದೇಶದ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ.

‘ಗೋ ರಕ್ಷಣೆಯ ಹೆಸರಿನಲ್ಲಿ ಕೆಲವು ಗುಂಪುಗಳು ಅಲ್ಪಸಂಖ್ಯಾತರು ಮತ್ತು ದಲಿತರ ಮೇಲೆ ಹಲ್ಲೆ ನಡೆಸುತ್ತಿವೆ. ಕೇಂದ್ರ ಸರ್ಕಾರ ಗೋ ರಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಗೋ ರಕ್ಷಕ ಗುಂಪುಗಳನ್ನು ನಿಷೇಧಿಸಬೇಕು’ ಎಂದು ಕೋರಿ ಸಲ್ಲಿಕೆಯಾಗಿರುವ ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಈ ನಿರ್ದೇಶನ ನೀಡಿದೆ.

ADVERTISEMENT

ಈ ಮಧ್ಯೆ, ಗೋ ರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬಿಜೆಪಿ ಅಧಿಕಾರದಲ್ಲಿರುವ ಗುಜರಾತ್‌ ಮತ್ತು ಜಾರ್ಖಂಡ್‌ ರಾಜ್ಯಗಳು ಸುಪ್ರೀಂಕೋರ್ಟ್‌ಗೆ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.