ADVERTISEMENT

ಚುನಾವಣೆ ಭದ್ರತೆಗೆ 2 ಲಕ್ಷ ಪೊಲೀಸ್‌ ಸಿಬ್ಬಂದಿ ಬಳಕೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2014, 9:37 IST
Last Updated 30 ಮಾರ್ಚ್ 2014, 9:37 IST

ನವದೆಹಲಿ (ಪಿಟಿಐ); ಏಪ್ರಿಲ್‌ 7ರಿಂದ ಆರಂಭವಾಗುವ 9 ಹಂತದ ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

543 ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ 81.4 ಕೋಟಿ ಜನರು ಮತ ಚಲಾಯಿಸಲಿದ್ದಾರೆ. ಭದ್ರತೆಗೆ ಕೇಂದ್ರ ಗೃಹ ಇಲಾಖೆಯು ಸೇನಾಪಡೆ ಯೋಧರು, ಅರೆ ಸೇನಾಪಡೆ ಯೋಧರು, ಸ್ಥಳೀಯ ಪೊಲೀಸರು, ಗೃಹರಕ್ಷಕದಳ ಸಿಬ್ಬಂದಿಗಳು ಸೇರಿದಂತೆ ಸುಮಾರು 2 ಲಕ್ಷ ಭದ್ರತಾ ಸಿಬ್ಬಂದಿಗಳನ್ನು ಒದಗಿಸಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಚುನಾವಣಾ ಕೆಲಸಕ್ಕೆ ಸಾವಿರಾರು ವಾಹನಗಳು, 12 ಹೆಲಿಕಾಫ್ಟರ್‌ಗಳನ್ನು ಬಳಕೆ ಮಾಡಲಾಗುತ್ತಿದೆ. ಈ ಭಾರಿ ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ರಾಜ್ಯಗಳು ಮತ್ತು ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ವ್ಯಾಪಕ ಬಿಗಿ ಭದ್ರತೆ ಕಲ್ಪಿಸಲಾಗುತ್ತಿದೆ ಎಂದು ಆಯೋಗ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT