ADVERTISEMENT

ಚೆನ್ನೈ- ಮಂಗಳೂರು ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿ 40 ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2015, 5:32 IST
Last Updated 4 ಸೆಪ್ಟೆಂಬರ್ 2015, 5:32 IST

ಚೆನ್ನೈ: ತಮಿಳುನಾಡಿನ ಪುವನೂರ್ ಬಳಿ ಚೆನ್ನೈ- ಮಂಗಳೂರು ಎಕ್ಸ್ ಪ್ರೆಸ್ ರೈಲು ಶುಕ್ರವಾರ ಬೆಳಗಿನ ಜಾವ  ಹಳಿತಪ್ಪಿದ್ದು, ಸುಮಾರು 40 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ.

ತಮಿಳುನಾಡಿನ ಕಡಲೂರು ಜಿಲ್ಲೆಯ ಪೂವನೂರ್ ಗ್ರಾಮದ ಬಳಿ ಬರುತ್ತಿದ್ದ ವೇಳೆ ಎಕ್ಸ್ ಪ್ರೆಸ್ ರೈಲಿನ ಆರು ಬೋಗಿಗಳು ಹಳಿತಪ್ಪಿವೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ಹಿನ್ನಲೆಯಲ್ಲಿ 10 ರೈಲು ಮಾರ್ಗಗಳಳನ್ನು ಬದಲಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT