ADVERTISEMENT

ಜಮ್ಮು ಕಾಶ್ಮೀರದಲ್ಲಿ ಲಘು ಭೂಕಂಪ

ಪಿಟಿಐ
Published 6 ಮಾರ್ಚ್ 2017, 6:34 IST
Last Updated 6 ಮಾರ್ಚ್ 2017, 6:34 IST
ಕಂಪನದ ತೀವ್ರತೆ ತೋರಿಸುವ ಸಿಸ್ಮೋಗ್ರಾಫ್ ಚಿತ
ಕಂಪನದ ತೀವ್ರತೆ ತೋರಿಸುವ ಸಿಸ್ಮೋಗ್ರಾಫ್ ಚಿತ   

ಶ್ರೀನಗರ:  ಕಾಶ್ಮೀರ ಕಣಿವೆಯಲ್ಲಿ ಸೋಮವಾರ ಬೆಳಗ್ಗೆ 8.41 ಕ್ಕೆ  ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.8ರಷ್ಟು ತೀವ್ರತೆ ದಾಖಲಾಗಿದೆ. ಅದಾಗ್ಯೂ, ಯಾವುದೇ ಸಾವು–ನೋವಿನ ಬಗ್ಗೆ ವರದಿಯಾಗಿಲ್ಲ.

‘ಸೋಮವಾರ ಬೆಳಗ್ಗೆ  8.41ಕ್ಕೆ ಲಘು ತೀವ್ರತೆಯ ಕಂಪನ ಸಂಭವಿಸಿದೆ’ ಎಂದು ಹವಾಮಾನ ಇಲಾಖೆಯ ವಕ್ತಾರರೊಬ್ಬರು ತಿಳಿಸಿದ್ದಾರೆ. ಅಲ್ಲದೇ,  ಗುಜರಾತ್, ರಾಜಸ್ತಾನ, ಹರಿಯಾಣ ರಾಜ್ಯಗಳಲ್ಲೂ ಭೂಮಿ ಕಂಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಮಾಲಯ ಪರ್ವತ ಶ್ರೇಣಿಗಳಲ್ಲಿ ಭೂಕಂಪ ಸಂಭವಿಸುವ ಸಾಧ್ಯತೆಗಳಿರುವುದರಿಂದ ಕಣಿವೆ ರಾಜ್ಯದಲ್ಲಿ ಭೂಕಂಪ ಸಂಭವಿಸಬಹುದು ಎಂದು ಹವಾಮಾನ ಇಲಾಖೆಯ  ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.