ADVERTISEMENT

ಜಯಾ ಸಾವಿನ ತನಿಖೆ: ಶಶಿಕಲಾ, ಅಪೋಲೊ ಆಸ್ಪತ್ರೆಗೆ ಸಮನ್ಸ್‌

ಏಜೆನ್ಸೀಸ್
Published 22 ಡಿಸೆಂಬರ್ 2017, 19:30 IST
Last Updated 22 ಡಿಸೆಂಬರ್ 2017, 19:30 IST

ಚೆನ್ನೈ (ಪಿಟಿಐ): ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿನ ತನಿಖೆ ನಡೆಸುತ್ತಿರುವ ತನಿಖಾ ತಂಡ ಜಯಾ ಅವರ ನಿಕಟವರ್ತಿ ವಿ.ಕೆ. ಶಶಿಕಲಾ ಮತ್ತು ಅಪೋಲೊ ಆಸ್ಪತ್ರೆಯ ಮುಖ್ಯಸ್ಥರಿಗೆ ಸಮನ್ಸ್‌ ಜಾರಿ ಮಾಡಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾ ಅವರಿಗೆ ಹದಿನೈದು ದಿನಗಳೊಳಗಾಗಿ ಉತ್ತರಿಸುವಂತೆ ನ್ಯಾಯಮೂರ್ತಿ ಎ. ಆರ್ಮುಗಂ ಅವರ ಏಕಸದಸ್ಯ ಪೀಠ ತಿಳಿಸಿದೆ. ಅಪೋಲೊ ಆಸ್ಪತ್ರೆಯ ಮುಖ್ಯಸ್ಥ ಡಾ. ಪ್ರತಾಪ್‌ ರೆಡ್ಡಿ ಮತ್ತು ಡಾ. ಪ್ರೀತಾ ರೆಡ್ಡಿ ಅವರಿಗೆ ಹತ್ತು ದಿನಗಳೊಳಗೆ ಉತ್ತರಿಸುವಂತೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT