ADVERTISEMENT

ಜಾಟ್‌ ವಿವಾದ: ಹರಿಯಾಣದಲ್ಲಿನಿಷೇಧಾಜ್ಞೆ

ಏಜೆನ್ಸೀಸ್
Published 18 ಮಾರ್ಚ್ 2017, 19:30 IST
Last Updated 18 ಮಾರ್ಚ್ 2017, 19:30 IST

ಚಂಡೀಗಡ: ಜಾಟ್‌  ಸಮುದಾಯದ ಸಂಘಟನೆಯ ಸದಸ್ಯರು ಮಾರ್ಚ್‌ 20ರಂದು ಸಂಸತ್ತಿಗೆ ಮುತ್ತಿಗೆ ಹಾಕಲು ನಿರ್ಧರಿಸಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ  ಹರಿಯಾಣದಲ್ಲಿ ಸೆಕ್ಷನ್‌ 144ರ ಅನ್ವಯ ನಿಷೇಧಾಜ್ಞೆ ಹೊರಡಿಸಲಾಗಿದೆ.

ಇಲ್ಲಿನ ಅನೇಕ ಸೂಕ್ಷ್ಮ ಜಿಲ್ಲೆಗಳಲ್ಲಿ ಅಂತರ್ಜಾಲ ಸೇವೆಯನ್ನು ಸಹ ಸ್ಥಗಿತಗೊಳಿಸಲಾಗಿದೆ.

ಅಪರಾಧ ದಂಡ ಪ್ರಕ್ರಿಯಾ ಸಂಹಿತೆ 144ರ ಅನ್ವಯ ರೋಹಟಗಿ, ಜಜ್ಜಾರ್‌, ಭಿವಾನಿ, ಚರ್ಖಿ, ದಾದ್ರಿ ಹಾಗೂ ಹಿಸಾರ್‌ ಜಿಲ್ಲೆಗಳಲ್ಲಿ ಕಾನೂನು ಬಾಹಿರವಾಗಿ ಸಭೆ ನಡೆಸುವುದನ್ನು ನಿಷೇಧಿಸಲಾಗಿದೆ. ಅನಿರ್ದಿಷ್ಟಾವಧಿವರೆಗೆ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಅಖಿಲ ಭಾರತ ಜಾಟ್‌ ಆಕರ್ಷಣ ಸಂಘರ್ಷ ಸಮಿತಿಯು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮಾರ್ಚ್‌ 20ರಂದು ಸಂಸತ್ತಿಗೆ ಮುತ್ತಿಗೆ ಹಾಕುವುದಾಗಿ ಬೆದರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.