ADVERTISEMENT

ಜಾನುವಾರುಗಳಿಗೆ ವಿಶಿಷ್ಟ ಗುರುತಿನ ಸಂಖ್ಯೆ?

ಏಜೆನ್ಸೀಸ್
Published 24 ಏಪ್ರಿಲ್ 2017, 17:28 IST
Last Updated 24 ಏಪ್ರಿಲ್ 2017, 17:28 IST
ಜಾನುವಾರುಗಳಿಗೆ ವಿಶಿಷ್ಟ ಗುರುತಿನ ಸಂಖ್ಯೆ?
ಜಾನುವಾರುಗಳಿಗೆ ವಿಶಿಷ್ಟ ಗುರುತಿನ ಸಂಖ್ಯೆ?   
ನವದೆಹಲಿ: ಭಾರತ–ಬಾಂಗ್ಲಾ ಗಡಿಯಲ್ಲಿ ನಡೆಯುವ ಪ್ರಾಣಿಗಳ ಕಳ್ಳಸಾಗಣೆಯನ್ನು ತಪ್ಪಿಸುವುದಕ್ಕಾಗಿ ಅವುಗಳಿಗೆ ವಿಶಿಷ್ಟ ಗುರುತಿನ ಸಂಖ್ಯೆ ನೀಡಬೇಕು ಎಂದು ತಜ್ಞರ ಸಮಿತಿಯೊಂದು ಶಿಫಾರಸು ಮಾಡಿದೆ. ಕೇಂದ್ರ ಸರ್ಕಾರವು ಈ ಶಿಫಾರಸಿನ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಸೋಮವಾರ ಮಾಹಿತಿ ನೀಡಿದೆ.

ಸುಪ್ರೀಂ ಕೋರ್ಟ್‌ ಆದೇಶದ ಅನ್ವಯ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಪಾಲಿಯುರೆಥೇನ್‌ ಟ್ಯಾಗ್‌ಗಳನ್ನು ಬಳಸಿ, ತಿದ್ದಲು ಸಾಧ್ಯವಾಗದ ರೀತಿಯಲ್ಲಿ ಜಾನುವಾರುಗಳಿಗೆ ಗುರುತಿನ ಸಂಖ್ಯೆ ಮತ್ತು ಜಾನುವಾರುಗಳ ರಾಜ್ಯಮಟ್ಟದ ದತ್ತಾಂಶವನ್ನು ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಬೇಕು. ನಂತರ ಈ ಮಾಹಿತಿಯನ್ನು ರಾಷ್ಟ್ರೀಯ ಆನ್‌ಲೈನ್‌ ಮಾಹಿತಿಕೋಶದೊಂದಿಗೆ ಜೋಡಿಸಬಹುದು ಎಂದು ಸಮಿತಿ ಶಿಫಾರಸು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.