ADVERTISEMENT

ಜಿಎಸ್‌ಟಿ ಚರ್ಚೆ: ಚಹಾ ಕೂಟಕ್ಕೆ ಸೋನಿಯಾಗೆ ಮೋದಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2015, 8:57 IST
Last Updated 27 ನವೆಂಬರ್ 2015, 8:57 IST

ನವದೆಹಲಿ(ಪಿಟಿಐ): ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಅವರನ್ನು ಚಹಾ ಕೂಟಕ್ಕೆ ಆಹ್ವಾನಿಸಿದ್ದು, ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಕುರಿತು ಮಹತ್ವದ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ದೆಹಲಿಯ ರೇಸ್ ಕೋರ್ಸ್ ರಸ್ತೆಯಲ್ಲಿನ ತಮ್ಮ ನಿವಾಸದಲ್ಲಿ ಇಂದು (ಶುಕ್ರವಾರ) ಸಂಜೆ 7ಕ್ಕೆ ಚಹಾ ಕೂಟಕ್ಕೆ ಆಗಮಿಸುವಂತೆ ಸೋನಿಯಾ ಹಾಗೂ ಮನಮೋಹನ್ ಸಿಂಗ್ ಅವರಿಗೆ ಮೋದಿ ಅವರು ಆಹ್ವಾನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಸತ್‌ನಲ್ಲಿ ಜಿಎಸ್‌ಟಿ ಬಿಕ್ಕಟ್ಟು ನಿವಾರಿಸಿ ಅಂಗೀಕಾರಿಸುವ ಹಾಗೂ ನಿರ್ಣಾಯಕ ಅಂಶಗಳ ಕುರಿತು ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ಜಿಎಸ್‌ಟಿ ಕುರಿತು ಮೋದಿ ಅವರು ಕಾಂಗ್ರೆಸ್‌ನ ಎಲ್ಲ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಗುರುವಾರ ತಿಳಿಸಿದ್ದರು.

ಹೊಸ ಪರೋಕ್ಷ ತೆರಿಗೆ ಏ. 1ರಿಂದ ಜಾರಿಗೆ ಬರುವಂತಾಗಲು ಪ್ರಸ್ತುತ ಚಳಿಗಾಲದ ಅಧಿವೇಶನದಲ್ಲಿ ಜಿಎಸ್‌ಟಿ ಬಿಲ್ ಸಂಸತ್ತಿನಲ್ಲಿ ಅನುಮೋದನೆ ಪಡೆಯುವ ಅಗತ್ಯವಿದೆ ಎಂದು ಜೇಟ್ಲಿ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.