ADVERTISEMENT

ಜೆಎಂಬಿ: ಆರು ಮಂದಿ ಸೆರೆ

ಪಿಟಿಐ
Published 26 ಸೆಪ್ಟೆಂಬರ್ 2016, 18:58 IST
Last Updated 26 ಸೆಪ್ಟೆಂಬರ್ 2016, 18:58 IST

ಕೋಲ್ಕತ್ತ: ಜಮಾತ್–ಉಲ್–ಮುಜಾಹಿದೀನ್ ಬಾಂಗ್ಲಾದೇಶ್ (ಜೆಎಂಬಿ) ಸಂಘಟನೆಗೆ ಸೇರಿದ ಆರು ಮಂದಿಯನ್ನು ‘ಕೋಲ್ಕತ್ತ ಪೊಲೀಸ್‌ ವಿಶೇಷ ಕಾರ್ಯಪಡೆ’ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂನಲ್ಲಿ ಸೋಮವಾರ ಬಂಧಿಸಿದೆ.

ಈ ಪೈಕಿ ನಾಲ್ವರು  ಖಗ್ರಾಗಢ ಸ್ಫೋಟ ಪ್ರಕರಣದಲ್ಲಿ ಬೇಕಾಗಿದ್ದವರು ಎನ್ನಲಾಗಿದೆ. ಬಂಧಿತರಲ್ಲಿ ಮೂವರು ಬಾಂಗ್ಲಾದೇಶದವರು ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ವಿಶಾಲ್ ಗರ್ಗ್ ತಿಳಿಸಿದರು. ‘ಖಗ್ರಾಗಢ ಸ್ಫೋಟದ ಬಳಿಕ ಇವರು ಪಶ್ಚಿಮ ಬಂಗಾಳ ಬಿಟ್ಟು ದಕ್ಷಿಣ ಭಾರತ ಮತ್ತು ಈಶಾನ್ಯ ರಾಜ್ಯಗಳಿಗೆ ತೆರಳಿದ್ದರು. ದಕ್ಷಿಣ ಭಾರತದ ರಾಜ್ಯಗಳಲ್ಲಿ ವಿಧ್ವಂಸಕ ಕೃತ್ಯಗಳನ್ನೆಸಗಲು ಸಂಚು ರೂಪಿಸುತ್ತಿದ್ದರು. ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲು ಪ್ರಯತ್ನಿಸುತ್ತಿದ್ದೇವೆ’ ಎಂದು ಗರ್ಗ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.