ADVERTISEMENT

ಜೆಎನ್‌ಯು ವಿದ್ಯಾರ್ಥಿ ಮುಖಂಡ ಬಂಧನ

ಅಫ್ಜಲ್‌ ಗುರುವಿಗೆ ಸಂಬಂಧಿಸಿದ ಕಾರ್ಯಕ್ರಮ ಆಯೋಜನೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2016, 10:13 IST
Last Updated 12 ಫೆಬ್ರುವರಿ 2016, 10:13 IST
ಜೆಎನ್‌ಯು ವಿದ್ಯಾರ್ಥಿ ಮುಖಂಡ ಬಂಧನ
ಜೆಎನ್‌ಯು ವಿದ್ಯಾರ್ಥಿ ಮುಖಂಡ ಬಂಧನ   

ನವದೆಹಲಿ (ಪಿಟಿಐ): ಅನುಮತಿ ರದ್ದತಿ ಹೊರತಾಗಿಯೂ ವಿ.ವಿ. ಆವರಣದಲ್ಲಿ ಉಗ್ರ ಅಫ್ಜಲ್‌ ಗುರುವಿಗೆ ಸಂಬಂಧಿಸಿದ ಕಾರ್ಯಕ್ರಮ ಆಯೋಜಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಾಹರ ಲಾಲ್‌ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಮುಖಂಡ ಕನ್ಯಾ ಕುಮಾರ್‌ನನ್ನು ಪೊಲೀಸರು ಶುಕ್ರವಾರ ವಶಕ್ಕೆ ತೆಗೆದುಕೊಂಡಿದ್ದಾರೆ.

‘ಜೆಎನ್‌ಯು ಕ್ಯಾಂಪಸ್‌ನಲ್ಲಿ  ಗುರುವಾರ ಪ್ರತಿಭಟನಾ ಮೆರವಣಿಗೆ ವೇಳೆ ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿ ಸಂಘಟನೆಗಳ ಇಂತಹ  ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

‘ದೇಶ ವಿರೋಧಿ ಘೋಷಣೆ ಕೂಗಿದ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದ್ದೇನೆ’ ಎಂದು ಅವರು ಹೇಳಿದರು.

ವಿಶ್ವವಿದ್ಯಾಲಯದ ಆವರಣದಲ್ಲೆಡೆ ಭಿತ್ತಿಪತ್ರಗಳನ್ನು ಅಂಟಿಸಿದ್ದ ವಿದ್ಯಾರ್ಥಿ ಸಂಘಟಕರು, ‘ಅಫ್ಜಲ್‌ ಗುರುವಿಗೆ ಸಂಬಂಧಿಸಿದಂತೆ ಆಯೋಜಿಸಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ಸೇರಿಕೊಳ್ಳುವಂತೆ  ಆಹ್ವಾನಿಸಿದ್ದರು.  ವಿಶ್ವವಿದ್ಯಾಲಯ, ಅನುಮತಿಯನ್ನು ರದ್ದುಗೊಳಿಸಿತ್ತು. ಆದರೂ ಅದನ್ನು ಲೆಕ್ಕಿಸದೆ ಪ್ರತಿಭಟನಾ ಮೆರವಣಿಗೆ ಜೊತೆಗೆ ಅಫ್ಜಲ್‌ ಗುರುವಿಗೆ ಸಂಬಂಧಿಸಿದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಿಜೆಪಿ ಸಂಸದ ಮೆಹಷಿಶ್‌ ಗಿರಿ ಮತ್ತು ಎಬಿವಿಪಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT