ADVERTISEMENT

ಜೇಟ್ಲಿ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2014, 11:26 IST
Last Updated 6 ಅಕ್ಟೋಬರ್ 2014, 11:26 IST

ನವದೆಹಲಿ(ಪಿಟಿಐ): ಪಾಕಿಸ್ತಾನ ನಿತಂತರ ಕದನ ವಿರಾಮ  ಉಲ್ಲಂಘಿಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ಅರುಣ್‌ ಜೇಟ್ಲಿ ಸೋಮವಾರ ಇಲ್ಲಿ ಹೇಳಿದರು.

ಭಾರತದ ಸೇನೆ ಸನ್ನದ್ಧವಾಗಿದ್ದು ಗಡಿಯಲ್ಲಿ ಪಾಕ್‌ ಸೈನಿಕರು ನಡೆಸುತ್ತಿರುವ ದಾಳಿಗೆ ಸಮರ್ಥವಾಗಿ ಪ್ರತ್ಯುತ್ತರ ನೀಡುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

ನಿರಂತರ ಕದನ ವಿರಾಮ ಉಲ್ಲಂಘನೆ ಮೂಲಕ ಪಾಕ್‌ ಗಡಿ ನಿಯಂತ್ರಣ ರೇಖೆ ಹಾಗೂ ಅಂತರಾಷ್ಟ್ರೀಯ ಗಡಿಯಲ್ಲಿ  ಆತಂಕದ ವಾತಾವರಣ  ಉಂಟುಮಾಡಲು ಪ್ರಯತ್ನಿಸುತ್ತಿದೆ. ಇದರಿಂದ ಮುಗ್ಧ ನಾಗರಿಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಉಭಯ ರಾಷ್ಟ್ರಗಳ ಬಾಂಧವ್ಯ ನೆಲಕ್ಕಚ್ಚಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.