ADVERTISEMENT

ಝೈಕಾ ವೈರಸ್‌ ನಿಯಂತ್ರಣಕ್ಕೆ ಸೂಚನೆ

ಪಿಟಿಐ
Published 30 ಸೆಪ್ಟೆಂಬರ್ 2016, 19:30 IST
Last Updated 30 ಸೆಪ್ಟೆಂಬರ್ 2016, 19:30 IST
ಝೈಕಾ ವೈರಸ್‌ ನಿಯಂತ್ರಣಕ್ಕೆ ಸೂಚನೆ
ಝೈಕಾ ವೈರಸ್‌ ನಿಯಂತ್ರಣಕ್ಕೆ ಸೂಚನೆ   

ನವದೆಹಲಿ:  ಝೈಕಾ ವೈರಸ್‌ ಪತ್ತೆ ಮತ್ತು ನಿಯಂತ್ರಣಕ್ಕೆ ನಿರ್ಣಾಯಕ ಕ್ರಮಗಳನ್ನು ಕೈಗೊಳ್ಳುವಂತೆ ಡಬ್ಲ್ಯೂಎಚ್‌ಒ ಭಾರತ ಸೇರಿದಂತೆ ಆಗ್ನೇಯ ಏಷ್ಯಾ ರಾಷ್ಟ್ರಗಳಿಗೆ ಸೂಚಿಸಿದೆ.

ಝೈಕಾ ವೈರಸ್‌ ಸೋಂಕು ಗರ್ಭಿಣಿಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಹೀಗಾಗಿ ಆಗ್ನೇಯ ಏಷ್ಯಾ ರಾಷ್ಟ್ರಗಳು ನಿರಂತರವಾಗಿ ನಿಗಾವಹಿಸಬೇಕಾಗಿದೆ ಎಂದು ಡಬ್ಲ್ಯೂಎಚ್‌ಒ ಆಗ್ನೇಯ ವಿಭಾಗದ ಪ್ರಾದೇಶಿಕ ನಿರ್ದೇಶಕಿ ಖೇತ್ರಪಾಲ್‌ ಸಿಂಗ್‌ ಸಲಹೆ ನೀಡಿದ್ದಾರೆ. ಸೊಳ್ಳೆಗಳ ನಿಯಂತ್ರಣಕ್ಕೆ ಸಾರ್ವಜನಿಕರಲ್ಲೂ ಜಾಗೃತಿ ಮೂಡಬೇಕು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.