ADVERTISEMENT

ಟಿಡಿಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2014, 11:17 IST
Last Updated 7 ಏಪ್ರಿಲ್ 2014, 11:17 IST

ಹೈದರಬಾದ್(ಪಿಟಿಐ): ಭಾರತೀಯ ಜನತಾ ಪಕ್ಷ (ಬಿಜೆಪಿ) ಜತೆ ಮೈತ್ರಿ ಮಾಡಿಕೊಂಡಿರುವ ತೆಲುಗು ದೇಶಂ ಪಾರ್ಟಿ (ಟಿಡಿಪಿ) ಲೋಕಸಭೆ ಹಾಗೂ ತೆಲಂಗಾಣ ಶಾಸನ ಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿತು.

ಮೈತ್ರಿ ಮಾಡಿಕೊಂಡಿರುವ ಬೆನ್ನಲ್ಲೇ ಟಿಡಿಪಿ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಾಮಪತ್ರ ಸಲ್ಲಿಕೆಗೆ ಇನ್ನೆರೆಡು ದಿನ ಮಾತ್ರ ಬಾಕಿ ಇರುವಾಗ ಪಟ್ಟಿ ಬಿಡುಗಡೆ ಮಾಡಿರುವುದು ಕುತೂಹಲ ಮೂಡಿಸಿದೆ.

27 ಶಾಸಕ ಸ್ಥಾನ ಹಾಗೂ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಕಣಕ್ಕಿಳಿಸಲಿರುವ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ಟಿಡಿಪಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ತಿಳಿಸಿದರು.

ADVERTISEMENT

ಆದಿಲಾಬಾದ್ ಕ್ಷೇತ್ರದಿಂದ ಹಾಲಿ ಸಂಸದ ರಮೇಶ್ ರಾಥೋಡ್ ಕಣಕ್ಕಿಳಿದರೆ, ಕೆ. ಮದನ್ ಮೋಹನ್ ರಾವ್ ಮತ್ತು ಬನೊತ್ ಮೋಹನ್ ಲಾಲ್ ಅವರು ಜಹಿರಾಬಾದ್, ಮಹಬೂಬಾಬಾದ್ ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ.

ಆರು ಮಂದಿ ಹಾಲಿ ಶಾಸಕರು, ಮಾಜಿ ಸಚಿವರೊಬ್ಬರು ಹಾಗೂ ಇತರ 21 ಅಭ್ಯರ್ಥಿಗಳನ್ನು ಒಳಗೊಂಡ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ತೆಲಂಗಾಣದ 119 ಶಾಸಕ ಸ್ಥಾನಗಳ ಪೈಕಿ ಟಿಡಿಪಿ 72 ಕ್ಷೇತ್ರಗಳಲ್ಲಿ ಉಳಿದ 47 ಕ್ಷೇತ್ರಗಳಲ್ಲಿ ಮೈತ್ರಿ ಕೂಟ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಸಲಿದೆ.

17 ಲೋಕಸಭಾ ಕ್ಷೇತ್ರಗಳಲ್ಲಿ ಟಿಡಿಪಿ ಒಂಬತ್ತು ಕ್ಷೇತ್ರಗಳಲ್ಲಿ, ಮೈತ್ರಿ ಕೂಟ ಬಿಜೆಪಿ ಎಂಟು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.