ADVERTISEMENT

ಟೆಕಿ ಹತ್ಯೆ: ಶಂಕಿತನ ಛಾಯಾಚಿತ್ರ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2016, 10:59 IST
Last Updated 30 ಜೂನ್ 2016, 10:59 IST
ಶಂಕಿತನ ಛಾಯಾಚಿತ್ರ
ಶಂಕಿತನ ಛಾಯಾಚಿತ್ರ   

ಚೆನ್ನೈ(ಪಿಟಿಐ): ಇನ್ಫೊಸಿಸ್‌ ಉದ್ಯೋಗಿ ಎಸ್‌. ಸ್ವಾತಿ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಗುರುವಾರ ಶಂಕಿತ ಆರೋಪಿಯ ಛಾಯಾಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.

ಘಟನಾ ಸ್ಥಳದಲ್ಲಿದ್ದ ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ಶಂಕಿತನ ಚಲನವಲನ ದಾಖಲಾಗಿತ್ತು. ಇದನ್ನು ಆಧರಿಸಿ, ಪೊಲೀಸರು ಶಂಕಿತ ವ್ಯಕ್ತಿಯ ಛಾಯಾಚಿತ್ರ ಬಿಡುಗಡೆ ಮಾಡಿದ್ದಾರೆ. 

ಚಿತ್ರದಲ್ಲಿರುವ ವ್ಯಕ್ತಿ ನೀಲಿ ಬಣ್ಣದ ಅಂಗಿ, ಕಪ್ಪು ಬಣ್ಣದ ಪ್ಯಾಂಟ್‌ ಧರಿಸಿದ್ದಾನೆ. ಈ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ನುಂಗಂಬಾಕ್ಕಂ ರೈಲು ನಿಲ್ದಾಣದಲ್ಲಿ ಜೂನ್‌ 24ರಂದು ಸ್ವಾತಿ ಅವರ ಕೊಲೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.