ADVERTISEMENT

ಡೀಸೆಲ್‌ ದರ ಇಳಿಕೆ ಸಂಭವ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2014, 19:30 IST
Last Updated 9 ಸೆಪ್ಟೆಂಬರ್ 2014, 19:30 IST

ನವದೆಹಲಿ: ಏಳು ವರ್ಷಗಳ ನಂತರ ಮೊದಲ ಬಾರಿಗೆ ಡೀಸೆಲ್‌ ಬೆಲೆ ತಾತ್ಕಾಲಿಕವಾಗಿ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಜಾಗತಿಕ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗುತ್ತಿರುವ ಕಾರಣ ಡೀಸೆಲ್‌ ದರ ಇಳಿಸಲು ಚಿಂತನೆ ನಡೆದಿದೆ.  ಈ ತಿಂಗಳ 15ರಂದು ಡೀಸೆಲ್‌ ದರ ಪರಿಷ್ಕರಣೆಯಾಗುವ  ನಿರೀಕ್ಷೆ ಇದೆ ಎಂದು ಪೆಟ್ರೋಲಿಯಂ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಡೀಸೆಲ್‌ ದರಗಳನ್ನು ನಿಯಂತ್ರಣ ಮುಕ್ತಗೊಳಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ತರಾತುರಿಯಲ್ಲಿ ತೆಗೆದುಕೊಳ್ಳುವ ಸಾಧ್ಯತೆ ಇಲ್ಲ. ಪೆಟ್ರೋಲಿಯಂ ಸಚಿವಾಲಯ ಇದುವರೆಗೂ ಸಂಪುಟದ ಟಿಪ್ಪಣಿಯನ್ನು ಸಿದ್ಧಪಡಿಸಿಲ್ಲ ಎಂದು ಗೊತ್ತಾಗಿದೆ.

ಗ್ರಾಹಕರ ಮೇಲಿನ ಹೊರೆಯನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಲಾಗುತ್ತದೆ. ಆದರೆ, ಇದನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರಗಳಿಗೆ ಹೋಲಿಸಲಾಗದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.