ADVERTISEMENT

ಡೆಹ್ರಾಡೂನ್‌ ನಕಲಿ ಎನ್‌ಕೌಂಟರ್‌: 17 ಪೊಲೀಸರು ತಪ್ಪಿತಸ್ಥರು

​ಪ್ರಜಾವಾಣಿ ವಾರ್ತೆ
Published 6 ಜೂನ್ 2014, 12:55 IST
Last Updated 6 ಜೂನ್ 2014, 12:55 IST

ನವದೆಹಲಿ (ಪಿಟಿಐ): ಉತ್ತರಾಖಂಡ್‌ ರಾಜ್ಯದ ರಾಜಧಾನಿ ಡೆಹ್ರಾಡೂನ್‌ನಲ್ಲಿ ನಡೆದಿದ್ದ ನಕಲಿ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಪೊಲೀಸರು ತಪ್ಪಿತಸ್ಥರೆಂದು ಸಿಬಿಐ ವಿಶೇಷ ನ್ಯಾಯಾಲಯ ಶುಕ್ರವಾರ ಮಹತ್ವದ ತೀರ್ಪು ಪ್ರಕಟಿಸಿದೆ.

2009ರಲ್ಲಿ ಎಂಬಿಎ ವಿದ್ಯಾರ್ಥಿ ರಣ್‌ಬೀರ್ ಸಿಂಗ್‌ ಅವರ ನಕಲಿ ಎನ್‌ಕೌಂಟರ್‌ ನಡೆದಿತ್ತು. ಸಿಬಿಐ ನ್ಯಾಯಾಲಯದ ವಿಶೇಷ ನ್ಯಾಯಧೀಶ ಜೆ.ಪಿ.ಎಸ್‌ ಮಲಿಕ್‌ 17 ಪೊಲೀಸರು ತಪ್ಪಿತಸ್ಥರೆಂದು ತೀರ್ಪು ನೀಡಿದರು. ಜೂನ್‌ 9ರಂದು ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿದರು.

ಒಟ್ಟು 18 ಪೊಲೀಸರ ವಿರುದ್ಧ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.