ADVERTISEMENT

‘ತರಾತುರಿಯಲ್ಲಿ ಜಿಎಸ್‌ಟಿ ಜಾರಿ ಮಾಡಿದ್ದರಿಂದ ಆರ್ಥಿಕ ಬೆಳವಣಿಗೆ ಕುಂಠಿತ’

ಪಿಟಿಐ
Published 18 ನವೆಂಬರ್ 2017, 13:22 IST
Last Updated 18 ನವೆಂಬರ್ 2017, 13:22 IST
ಮನಮೋಹನ್ ಸಿಂಗ್ (ಸಂಗ್ರಹ ಚಿತ್ರ)
ಮನಮೋಹನ್ ಸಿಂಗ್ (ಸಂಗ್ರಹ ಚಿತ್ರ)   

ಕೊಚ್ಚಿ: ದೊಡ್ಡ ಮುಖಬೆಲೆಯ ನೋಟು ರದ್ದು ಮಾಡಿದ ಬೆನ್ನಲ್ಲೇ ತರಾತುರಿಯಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪದ್ಧತಿ ಜಾರಿ ಮಾಡಿದ್ದರಿಂದ ದೇಶದ ಆರ್ಥಿಕ ಬೆಳವಣಿಗೆ ಕುಂಠಿತವಾಗಿದೆ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಟೀಕಿಸಿದರು.

ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಇಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳನ್ನು ತೀಕ್ಷ್ಣವಾಗಿ ಟೀಕಿಸಿದರು. ದೊಡ್ಡ ಮುಖಬೆಲೆಯ ನೋಟು ರದ್ದತಿ ಐತಿಹಾಸಿಕ ಪ್ರಮಾದ ಎಂದು ಅವರು ಹೇಳಿದರು.

ಜುಲೈನಲ್ಲಿ ತರಾತುರಿಯಲ್ಲಿ ಜಿಎಸ್‌ಟಿ ಜಾರಿಗೆ ತರುವ ಮೂಲಕ ಬಿಜೆಪಿ ಸರ್ಕಾರ ಜನರ ಮೇಲೆ ಮತ್ತಷ್ಟು ಕಠಿಣ ಪರಿಸ್ಥಿತಿಯನ್ನು ಹೇರಿತು ಎಂದು ಅವರು ಆರೋಪಿಸಿದರು.

ADVERTISEMENT

‘ತರಾತುರಿಯಲ್ಲಿ ದೊಡ್ಡ ಮುಖಬೆಲೆಯ ನೋಟು ರದ್ದು ಮತ್ತು ಜಿಎಸ್‌ಟಿ ಜಾರಿ ಮಾಡಿದ್ದರಿಂದ ಆದ ಪರಿಣಾಮವೇನು? ಇದರಿಂದಾಗಿ ಆರ್ಥಿಕ ಬೆಳವಣಿಗೆ ಕುಂಠಿತವಾಯಿತು’ ಎಂದು ಅವರು ಹೇಳಿದರು.

2015-16ರಲ್ಲಿ ಶೇಕಡಾ 7.2ರಷ್ಟಿದ್ದ ಜಿಡಿಪಿ ಬೆಳವಣಿಗೆ ದರ 2017–18ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಶೇಕಡಾ 5.7ಕ್ಕೆ ಇಳಿಕೆಯಾಗಿದೆ. ಸಣ್ಣ ಉದ್ದಿಮೆ ಮತ್ತು ವ್ಯಾಪಾರಿಗಳಿಗೆ ತೀವ್ರ ತೊಂದರೆಯಾಗಿದೆ ಎಂದು ಸಿಂಗ್ ಹೇಳಿದರು. ಅಲ್ಲದೆ, ಈ ಪರಿಸ್ಥಿತಿ ತಕ್ಷಣವೇ ಸುಧಾರಿಸುವ ಸಾಧ್ಯತೆ ಕಾಣಿಸುತ್ತಿಲ್ಲ ಎಂದೂ ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.