ADVERTISEMENT

ತಾಜ್‌ ಪ್ರವೇಶಕ್ಕೆ ಮಿತಿ: ಚಿಂತನೆ

ಪಿಟಿಐ
Published 28 ಆಗಸ್ಟ್ 2016, 19:30 IST
Last Updated 28 ಆಗಸ್ಟ್ 2016, 19:30 IST

ನವದೆಹಲಿ(ಪಿಟಿಐ): ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ತಾಜ್ ಮಹಲ್‌ಗೆ ಬರುವ ಪ್ರವಾಸಿಗರ ಸಂಖ್ಯೆಗೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ.

ಪ್ರತಿನಿತ್ಯ ಭಾರೀ ಸಂಖ್ಯೆಯಲ್ಲಿ ಜನರು ಭೇಟಿ ನೀಡುವುದರಿಂದ 17ನೇ ಶತಮಾನದಲ್ಲಿ ಮೊಘಲರು ನಿರ್ಮಿಸಿರುವ ಈ ಭವ್ಯ ಸ್ಮಾರಕಕ್ಕೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಜನರನ್ನು ನಿಯಂತ್ರಿಸಲು ಸರ್ಕಾರ ಚಿಂತನೆ ನಡೆಸಿದೆ.

‘ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯ(ನೀರಿ) ನಡೆಸಿದ ಅಧ್ಯಯನದ ಆಧಾರದಲ್ಲಿ ಸಾರ್ವಜನಿಕರ ಭೇಟಿಯ ಸಮಯವನ್ನು ಇಳಿಸುವುದೂ ಸೇರಿದಂತೆ ಕೆಲವು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ’ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣೆ  (ಎಎಸ್‌ಐ) ಅಧಿಕಾರಿಗಳು ಹೇಳಿದ್ದಾರೆ.

ಪ್ರತಿದಿನ ಸಾವಿರಾರು ವೀಕ್ಷಕರು ಸ್ಮಾರಕಕ್ಕೆ ಭೇಟಿ ನೀಡುತ್ತಾರೆ. ಇದರಿಂದ ತಾಜ್‌ ಸೌಂದರ್ಯಕ್ಕೆ ಹಾನಿಯಾಗುತ್ತಿದೆ ಎಂದು ಎಎಸ್‌ಐ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.