ADVERTISEMENT

ತಿರುಪತಿ ವಿಮಾನ ನಿಲ್ದಾಣ ಜೂನ್‌ನಲ್ಲಿ ಕಾರ್ಯಾರಂಭ

​ಪ್ರಜಾವಾಣಿ ವಾರ್ತೆ
Published 24 ಮೇ 2016, 19:30 IST
Last Updated 24 ಮೇ 2016, 19:30 IST

ವಿಜಯವಾಡ (ಪಿಟಿಐ): ‘ತಿರುಪತಿ ವಿಮಾನ ನಿಲ್ದಾಣದಿಂದ ಜೂನ್‌ ಅಂತ್ಯದಲ್ಲಿ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ವಿಮಾನಗಳ ಹಾರಾಟ ಶುರುವಾಗಲಿದೆ’ ಎಂದು ಆಂಧ್ರಪ್ರದೇಶದ ಇಂಧನ, ಮೂಲಸೌಲಭ್ಯ ಹಾಗೂ ಹೂಡಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅಜಯ್‌ ಜೈನ್‌ ಮಂಗಳವಾರ ತಿಳಿಸಿದ್ದಾರೆ.

‘ಹೊಸದಾಗಿ ನಿರ್ಮಿಸಿರುವ ವಿಮಾನ ನಿಲ್ದಾಣದಲ್ಲಿ ಅಂತಿಮ ಹಂತದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಅದಾಗುತ್ತಿದ್ದಂತೆ ವಿಮಾನಗಳ ಹಾರಾಟ ಆರಂಭಿಸಲಾಗುವುದು. ಆರಂಭದಲ್ಲಿ ಅಮೆರಿಕ ಮತ್ತು ದೆಹಲಿಯ ಮೂಲಕ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ವಿಮಾನಗಳು ಹಾರಾಟ ನಡೆಸಲಿವೆ. ಮುಂದಿನ ದಿನಗಳಲ್ಲಿ ಇತರ ರಾಷ್ಟ್ರಗಳಿಗೆ ಇಲ್ಲಿಂದ ವಿಮಾನಗಳು ಹೊರಡಲಿವೆ’ ಎಂದು ಜೈನ್‌ ತಿಳಿಸಿದರು.

ವಿಜಯವಾಡ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್‌ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಕಾಮಗಾರಿ ಪೂರ್ಣಗೊಳ್ಳುತ್ತಿದ್ದಂತೆ ಇಲ್ಲಿಂದಲೂ ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ಆರಂಭಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.