ADVERTISEMENT

ತೋಮರ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2015, 6:39 IST
Last Updated 11 ಜೂನ್ 2015, 6:39 IST

ನವದೆಹಲಿ (ಐಎಎನ್‌ಎಸ್‌): ನಕಲಿ ಪದವಿ ಪ್ರಮಾಣ ಪತ್ರ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ದೆಹಲಿಯ ಕಾನೂನು ಖಾತೆ ಮಾಜಿ ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರ ಜಾಮೀನು ಅರ್ಜಿಯನ್ನು ಸ್ಥಳೀಯ ನ್ಯಾಯಾಲಯ  ಜೂನ್‌ 16ಕ್ಕೆ ಮುಂದೂಡಿದೆ.

ಪ್ರಕರಣದ ತನಿಖಾಧಿಕಾರಿ ದೆಹಲಿ ನಗರದಿಂದ ಹೊರಗಿರುವುದು ಹಾಗೂ ತನಿಖೆಯ ಪ್ರಗತಿ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಲಭ್ಯವಿಲ್ಲದಿರುವುದನ್ನು ಪರಿಗಣಿಸಿದ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಸಂಜೀವ್ ಜೈನ್‌, ವಿಚಾರಣೆಯನ್ನು ಮುಂದಿನ ಮಂಗಳವಾರಕ್ಕೆ ಮುಂದೂಡಿದರು.

ನಕಲಿ ಪದವಿ ಪ್ರಕರಣ ಸಂಬಂಧ ತೋಮರ್ ಅವರನ್ನು ದೆಹಲಿಯ ಪೊಲೀಸರು ಮಂಗಳವಾರ ಬಂಧಿಸಿದ್ದರು. ಬಳಿಕ  ನ್ಯಾಯಾಲಯ ತೋಮರ್ ಅವರನ್ನು ನಾಲ್ಕು ದಿನಗಳ ಪೊಲೀಸ್ ವಶಕ್ಕೆ ನೀಡಿತ್ತು. ಪ್ರಕರಣದ ಹಿಂದೆ ಸಂಘಟಿತ ಜಾಲ ಇದೆಯೇ ಎಂಬುದರ ಕುರಿತ ತನಿಖೆಗೆ ತೋಮರ್‌ ಅವರನ್ನು ಪೊಲೀಸರು ಉತ್ತರ ಪ್ರದೇಶದ ಫೈಜಾಬಾದ್‌ಗೆ ಕರೆದೊಯ್ದಿದ್ದರು.

ADVERTISEMENT

ತೋಮರ್ ಅವರ ವಿರುದ್ಧ ವಂಚನೆ, ನಕಲಿ ದಾಖಲೆ ಸೃಷ್ಟಿ ಹಾಗೂ ಪಿತೂರಿ ಆರೋಪಗಳ ಮೇಲೆ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.