ADVERTISEMENT

‘ತ್ರಿವಳಿ ತಲಾಖ್ ಕುರಿತ ನಂಬಿಕೆ ರಾಮನ ಹುಟ್ಟಿನ ಬಗೆಗಿನ ಹಿಂದೂಗಳ ನಂಬಿಕೆಗೆ ಸಮ’

ಪಿಟಿಐ
Published 16 ಮೇ 2017, 7:32 IST
Last Updated 16 ಮೇ 2017, 7:32 IST
ಸುಪ್ರೀಂ ಕೋರ್ಟ್‌ (ಸಾಂದರ್ಭಿಕ ಚಿತ್ರ)
ಸುಪ್ರೀಂ ಕೋರ್ಟ್‌ (ಸಾಂದರ್ಭಿಕ ಚಿತ್ರ)   

ನವದೆಹಲಿ: ತ್ರಿವಳಿ ತಲಾಖ್‌ ನಂಬಿಕೆಗೆ ಸಂಬಂಧಿಸಿದ ವಿಷಯ. ಭಗವಾನ್ ರಾಮ ಅಯೋಧ್ಯೆಯಲ್ಲಿ ಜನಿಸಿದ್ದಾನೆ ಎಂಬ ಹಿಂದೂಗಳ ನಂಬಿಕೆಗೆ ಸಮನಾದದ್ದು ಎಂದು ಸುಪ್ರೀಂ ಕೋರ್ಟ್‌ಗೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ತಿಳಿಸಿದೆ.

ತ್ರಿವಳಿ ತಲಾಖ್ ಅನ್ನು ಮುಸ್ಲಿಂ ಸಮುದಾಯವು ಕಳೆದ 1,400 ವರ್ಷಗಳಿಂದಲೂ ಆಚರಿಸುತ್ತಾ ಬಂದಿದೆ. ಇದು ನಂಬಿಕೆಗೆ ಸಂಬಂಧಿಸಿದ ವಿಷಯ. ಹೀಗಾಗಿ ಸಾಂವಿಧಾನಿಕ ನೈತಿಕತೆ ಮತ್ತು ಸಮಾನತೆಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಮಂಡಳಿ ಹೇಳಿದೆ.

‘ತ್ರಿವಳಿ ತಲಾಖ್ ಅನ್ನು ಸಾವಿರಾರು ವರ್ಷಗಳಿಂದ ಆಚರಿಸುತ್ತಾ ಬರಲಾಗುತ್ತಿದೆ. ಅದು ಇಸ್ಲಾಮಿಕ್‌ಗೆ ವಿರುದ್ಧವಾದದ್ದು ಎನ್ನಲು ನಾವು ಯಾರು?’ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಪರ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದಾರೆ.

ADVERTISEMENT

ತ್ರಿವಳಿ ತಲಾಖ್ ಅನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದಲ್ಲಿ ಮುಸ್ಲಿಮರ ವಿವಾಹ ಮತ್ತು ವಿಚ್ಛೇದನಕ್ಕೆ ಸಂಬಂಧಿಸಿ ಹೊಸ ಕಾನೂನು ರಚಿಸಲು ಸಿದ್ಧವಿರುವುದಾಗಿ ಕೇಂದ್ರ ಸರ್ಕಾರ ಸೋಮವಾರ ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.