ADVERTISEMENT

ದಲಿತರ ಮನೆಯಲ್ಲಿ ಯೋಗಿ ಆದಿತ್ಯನಾಥ್‌ ಊಟ

ಪಿಟಿಐ
Published 24 ಏಪ್ರಿಲ್ 2018, 17:46 IST
Last Updated 24 ಏಪ್ರಿಲ್ 2018, 17:46 IST
ಪ್ರತಾಪಗಡ ಜಿಲ್ಲೆಯ ಮಧುಪುರ್‌ ಗ್ರಾಮದ ದಲಿತರ ಮನೆಯಲ್ಲಿ ಸೋಮವಾರ ರಾತ್ರಿ ಊಟ ಮಾಡಿದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ –ಪಿಟಿಐ ಚಿತ್ರ
ಪ್ರತಾಪಗಡ ಜಿಲ್ಲೆಯ ಮಧುಪುರ್‌ ಗ್ರಾಮದ ದಲಿತರ ಮನೆಯಲ್ಲಿ ಸೋಮವಾರ ರಾತ್ರಿ ಊಟ ಮಾಡಿದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ –ಪಿಟಿಐ ಚಿತ್ರ   

ಲಖನೌ : 2019ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದಲಿತರ ಮತ ಸೆಳೆಯಲು ಈಗಿನಿಂದಲೇ ಕಸರತ್ತು ಆರಂಭಿಸಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ, ಪ್ರತಾಪಗಡ ಜಿಲ್ಲೆಯ ಮಧುಪುರ್‌ ಗ್ರಾಮದಲ್ಲಿ ಸೋಮವಾರ ಗ್ರಾಮಸಭೆ ನಡೆದ ಬಳಿಕ ದಲಿತರೊಬ್ಬರ ಮನೆಯಲ್ಲಿ ರಾತ್ರಿ ಊಟ ಸೇವಿಸಿದರು.

‘ಗ್ರಾಮ್‌ ಸ್ವರಾಜ್‌ ಅಭಿಯಾನ’ದ ಅಂಗವಾಗಿ ಸರ್ಕಾರಿ ಯೋಜನೆಗಳ ಯಶಸ್ಸಿನ ವಾಸ್ತವಾಂಶ ತಿಳಿದುಕೊಳ್ಳಲು ಇಲ್ಲಿನ ‘ಗ್ರಾಮಸಭೆ’ಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಸ್ಥಳೀಯರು ಸಲ್ಲಿಸಿದ ಅಹವಾಲುಗಳನ್ನು ಸ್ವೀಕರಿಸಿದರು. ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಇದಾದ ಬಳಿಕ ದಲಿತ ಸಮುದಾಯದ ದಯಾರಾಮ್‌ ಸರೋಜ್‌ ಮನೆಯಲ್ಲಿ ರಾತ್ರಿ ಊಟ ಸೇವಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.