ADVERTISEMENT

ದುಬಾರಿ ಬಾಟಲಿ ನೀರು: ಕ್ರಮಕ್ಕೆ ‘ಸುಪ್ರೀಂ’ ನಕಾರ

ಏಜೆನ್ಸೀಸ್
Published 12 ಡಿಸೆಂಬರ್ 2017, 19:30 IST
Last Updated 12 ಡಿಸೆಂಬರ್ 2017, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದುಬಾರಿ ಬಾಟಲಿ ನೀರು ಮಾರಾಟ ಮಾಡುವ ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ದಂಡ ಮತ್ತು ಜೈಲು ಶಿಕ್ಷೆ ವಿಧಿಸುವಂತೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಳ್ಳಿ ಹಾಕಿದೆ.

ನೀರಿನ ಬಾಟಲಿ ಮೇಲೆ ಅಚ್ಚಾದ ಗರಿಷ್ಠ ಚಿಲ್ಲರೆ ಮಾರಾಟ ದರಕ್ಕಿಂತ (ಎಂಆರ್‌ಪಿ) ಹೆಚ್ಚಿನ ಹಣ ವಸೂಲಿ ಮಾಡುವ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಮಾಲೀಕರಿಗೆ ₹25 ಸಾವಿರ ದಂಡ ಮತ್ತು ಜೈಲು ಶಿಕ್ಷೆ ವಿಧಿಸುವಂತೆ ಕೇಂದ್ರ ಮನವಿ ಮಾಡಿತ್ತು.

ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಈ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ದ್ವಿಸದಸ್ಯ ಪೀಠ ಸ್ಪಷ್ಟಪಡಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.