ADVERTISEMENT

ದುರ್ಗಾದೇವಿಯ ಬಗ್ಗೆ ಅಶ್ಲೀಲ ಪದ ಬಳಕೆ: ದೂರು

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2017, 19:49 IST
Last Updated 24 ಸೆಪ್ಟೆಂಬರ್ 2017, 19:49 IST
ದುರ್ಗಾದೇವಿಯ ಬಗ್ಗೆ ಅಶ್ಲೀಲ ಪದ ಬಳಕೆ: ದೂರು
ದುರ್ಗಾದೇವಿಯ ಬಗ್ಗೆ ಅಶ್ಲೀಲ ಪದ ಬಳಕೆ: ದೂರು   

ನವದೆಹಲಿ: ದುರ್ಗಾ ಮಾತೆ ಕುರಿತು ಸಾಮಾಜಿಕ ಜಾಲತಾಣ ಫೇಸ್‌ಬುಕ್ ನಲ್ಲಿ ಅಶ್ಲೀಲ ಭಾಷೆ ಬಳಕೆ ಮಾಡಿ ಬರಹ ಪ್ರಕಟಿಸಿರುವ ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಕೇದಾರ್ ಕುಮಾರ್ ಮಂಡಲ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಇದೇ 22 ರಂದು ಕೇದಾರ್‌ ಅವರು ದೇವಿ ವಿರುದ್ಧ ತೀರಾ ಕೆಟ್ಟ ಶಬ್ದ ಬಳಕೆ ಮಾಡಿ ಬರಹ ಪ್ರಕಟಿಸಿದ್ದರು. ಈ ಬರಹಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಷನಲ್ ಡೆಮಾಕ್ರಟಿಕ್ ಟೀಚರ್ಸ್ ಫ್ರಂಟ್ ಈ ಬಗ್ಗೆ ಪೊಲೀಸರಿಗೆ ದೂರು ನೀಡಿತ್ತು. ಆಮೇಲೆ ಮಂಡಲ್ ಆ ಬರಹವನ್ನು ಫೇಸ್‌ಬುಕ್‌ನಿಂದ ಅಳಿಸಿಹಾಕಿದ್ದರು.

ದೆಹಲಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಕೂಡಲೇ ಮಂಡಲ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿದೆ. ಮಂಡಲ್‌ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದು, ಈವರೆಗೆ ಅವರನ್ನು ಬಂಧಿಸಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.