ADVERTISEMENT

ದೆಹಲಿಗೆ ಆಗಮಿಸಿದ ಕಲಾಂ ಪಾರ್ಥಿವ ಶರೀರ

​ಪ್ರಜಾವಾಣಿ ವಾರ್ತೆ
Published 28 ಜುಲೈ 2015, 9:02 IST
Last Updated 28 ಜುಲೈ 2015, 9:02 IST

ನವದೆಹಲಿ (ಪಿಟಿಐ/ಐಎಎನ್‌ಎಸ್‌): ನಿನ್ನೆ ವಿಧಿವಶರಾದ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್‌ ಕಲಾಂ ಅವರ ಪಾರ್ಥಿವ ಶರೀರವನ್ನು ದೆಹಲಿಗೆ ತರಲಾಯಿತು.

ಶಿಲ್ಲಾಂಗ್‌ನಿಂದ 12.30ರ ಸುಮಾರಿಗೆ ವಾಯುಪಡೆಯ ವಿಶೇಷ ವಿಮಾನದಲ್ಲಿ ಕಲಾಂ ಅವರ ಪಾರ್ಥಿವ ಶರೀರ ದೆಹಲಿಗೆ ಆಗಮಿಸಿತು.  ಪಾಲಂ ವಿಮಾನ ನಿಲ್ದಾಣದಲ್ಲಿ ಕಲಾಂ ಅವರ ಪಾರ್ಥಿವ ಶರೀರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ಮನೋಹರ್‌ ಪರಿಕ್ಕರ್‌ ಅಂತಿಮ ನಮನ ಸಲ್ಲಿಸಿದರು.  ಇದೇ  ವೇಳೆ ಮೂರು ಸೇನಾ ಮುಖ್ಯಸ್ಥರಿಂದ ಗೌರವ ವಂದನೆ ಸಲ್ಲಿಸಲಾಯಿತು.

ಮಧ್ಯಾಹ್ನ ಒಂದು ಗಂಟೆಯಿಂದ ಮೂರು ಗಂಟೆಯವರೆಗೆ ಗಣ್ಯ ವ್ಯಕ್ತಿಗಳು ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದ್ದು ಮಧ್ಯಾಹ್ನ ಮೂರು ಗಂಟೆಯ ಬಳಿಕ  ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ  ಮಾಡಲಾಗಿದೆ.

ನಾಳೆ ರಾಮೇಶ್ವರಂನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT