ADVERTISEMENT

ದೆಹಲಿ ವಿಧಾನಸಭೆ ವಿಸರ್ಜನೆ: ಸಂಪುಟ ಅಸ್ತು

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2014, 14:28 IST
Last Updated 4 ನವೆಂಬರ್ 2014, 14:28 IST

ನವದೆಹಲಿ (ಪಿಟಿಐ): ದೆಹಲಿಯಲ್ಲಿ ಸರ್ಕಾರ ರಚಿಸುವಂತೆ ಲೆಫ್ಟಿನೆಂಟ್‌ ಗವರ್ನರ್‌ ನಜೀಬ್‌ ಜಂಗ್‌ ಅವರು ಮುಂದಿಟ್ಟ ಆಹ್ವಾನವನ್ನು ರಾಜ­ಕೀಯ ಪಕ್ಷಗಳೂ ಒಪ್ಪಿ­ಕೊಳ್ಳದ ಕಾರಣ ಚುನಾ­ವಣೆ ನಡೆಸುವಂತೆ ಲೆಫ್ಟಿನೆಂಟ್‌ ಗವರ್ನರ್‌ ರಾಷ್ಟ್ರಪತಿಗೆ ಶಿಫಾರಸು ಮಾಡಿದ್ದು, ಇದಕ್ಕೆ ಸಚಿವ ಸಂಪುಟ ಸಭೆ ಮಂಗಳವಾರ ಸಮ್ಮತಿ ಸೂಚಿಸಿದೆ.

ಇದರಿಂದ  ಎಂಟು ತಿಂಗಳ ರಾಜಕೀಯ ಅನಿಶ್ಚಿತತೆಗೆ ಕೊನೆಗೂ ತೆರೆ ಬಿದ್ದಂತಾಗಿದೆ.

ಸರ್ಕಾರ ರಚನೆ ವಿಷಯವಾಗಿ ಜಂಗ್‌ ಅವರು ಬಿಜೆಪಿ, ಆಮ್‌ ಆದ್ಮಿ ಪಕ್ಷ (ಎಪಿಪಿ) ಹಾಗೂ ಕಾಂಗ್ರೆಸ್‌ ಮುಖಂಡರ ಜತೆ ಸೋಮವಾರ ಚರ್ಚೆ ನಡೆಸಿದರು. ಸರ್ಕಾರ ರಚಿಸುವುದಕ್ಕೆ ಬಿಜೆಪಿ ನಿರಾಕರಿ­ಸಿದರೆ, ಎಎಪಿ ಹಾಗೂ ಕಾಂಗ್ರೆಸ್‌ ತಕ್ಷಣವೇ ಚುನಾವಣೆ  ನಡೆಸುವುದಕ್ಕೆ ಸಮ್ಮತಿ ಸೂಚಿಸಿದ್ದವು.

ಈ ಹಿನ್ನೆಲೆಯಲ್ಲಿ ವಿಧಾನಸಭೆ ವಿಸರ್ಜಿಸುವಂತೆ ರಾಷ್ಟ್ರ­ಪತಿ ಪ್ರಣವ್‌ ಮುಖರ್ಜಿ ಅವರಿಗೆ ಜಂಗ್‌ ಶಿಫಾರಸು ಮಾಡಿದ್ದರು. ಇಂದು ಮಧ್ಯಾಹ್ನ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ದೆಹಲಿ ವಿಧಾನಸಭಾ ಚುನಾವಣೆ ಫೆಬ್ರುವರಿಯಲ್ಲಿ ನಡೆಯುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT