ADVERTISEMENT

ದೆಹಲಿ: 500 ಗುಡಿಸಲು ಬೆಂಕಿಗೆ ಆಹುತಿ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2014, 10:07 IST
Last Updated 25 ಏಪ್ರಿಲ್ 2014, 10:07 IST

ನವದೆಹಲಿ (ಪಿಟಿಐ): ದಕ್ಷಿಣ ದೆಹಲಿಯ  ವಸಂತ್ ಕುಂಜ್ ಪ್ರದೇಶದ  ಕೊಳೆಗೇರಿಯಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅನಾಹುತದಲ್ಲಿ  ಸುಮಾರು 500ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮ ವಾಗಿವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಗ್ಗೆ 8.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಸಾವಿರಾರು ಜನರು ಮನೆ ಕಳೆದುಕೊಂಡು ನಿರ್ವಸತಿಗರಾಗಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು, ಆಹಾರ ಪದಾರ್ಥಗಳು, ಬಟ್ಟೆಗಳು ಬೆಂಕಿಗೆ ಆಹುತಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಕಿ ದುರಂತಕ್ಕೆ ಕಾರಣ ಏನು ಎಂಬುದು ಇನ್ನು ನಿಖರವಾಗಿ ತಿಳಿದು ಬಂದಿಲ್ಲ. ಈ ಸಂಬಂಧ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ  ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT