ಭುವನೇಶ್ವರ (ಪಿಟಿಐ): ಬಿಜು ಜನತಾ ದಳ (ಬಿಜೆಡಿ) ಮುಖ್ಯಸ್ಥ ನವೀನ್ ಪಟ್ನಾಯಕ್ ಅವರು ಸತತ ನಾಲ್ಕನೇ ಬಾರಿಗೆ ಒಡಿಶಾ ಮುಖ್ಯಮಂತ್ರಿಯಾಗಲಿದ್ದಾರೆ.
ಬಿಜೆಡಿಯ ಮುಖ್ಯ ಕಚೇರಿಯಲ್ಲಿ ಭಾನುವಾರ ನಡೆದ ಶಾಸಕಾಂಗ ಪಕ್ಷದ ಮೊದಲ ಸಭೆಯಲ್ಲಿ ನವೀನ್ ಪಟ್ನಾಯಕ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ನಂತರ ಮಾತನಾಡಿದ ಪಟ್ನಾಯಕ್, ‘ರಾಜ್ಯ ಹಾಗೂ ಜನತೆಯ ಅಭಿವೃದ್ಧಿಗಾಗಿ ನಾವೆಲ್ಲ ಹೊಸ ಉತ್ಸಾಹದಿಂದ ಶ್ರಮಿಸುತ್ತೇವೆ’ ಎಂದು ಭರವಸೆ ನೀಡಿದರು.
147 ಸದಸ್ಯ ಬಲದ ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಡಿ 117 ಕ್ಷೇತ್ರಗಳಲ್ಲಿ ಭರ್ಜರಿ ಜಯ ಸಾಧಿಸಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.