ಅಹಮದಾಬಾದ್: ತಾವು ವಿವಾಹಿತ ಎನ್ನುವುದನ್ನು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಕೊನೆಗೂ ಒಪ್ಪಿಕೊಂಡಿದ್ದಾರೆ. ಜಶೋದಾಬೆನ್್ ತಮ್ಮ ಪತ್ನಿ ಎನ್ನುವುದನ್ನು ಬುಧವಾರ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆದರೆ ಪತ್ನಿಯ ಪ್ಯಾನ್್ ಸಂಖ್ಯೆ, ಆದಾಯ ಇತ್ಯಾದಿ ವಿವರಗಳು ತಮಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಜಶೋದಾಬೆನ್, ಇತ್ತೀಚೆಗಷ್ಟೇ ನಿವೃತ್ತರಾಗಿದ್ದಾರೆ. ತಾವು ಮೋದಿ ಅವರ ಪತ್ನಿ ಎಂದು ಅವರು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದಾರೆ.
೨೦೧೨ರ ವಿಧಾನಸಭೆ ಚುನಾವಣೆಯಲ್ಲಿ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ಮೋದಿ, ತಮ್ಮ ವಿವಾಹದ ಬಗ್ಗೆ ಮಾಹಿತಿ ಕೊಟ್ಟಿರಲಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.