ADVERTISEMENT

ನಾಳೆಯಿಂದ ಸಂಸತ್ತಿನ ಚಳಿಗಾಲದ ಅಧಿವೇಶನ

ಅಸಹಿಷ್ಣುತೆ ವಿಚಾರ ಚರ್ಚೆಗೆ; ಬೆಂಗಳೂರಿನಲ್ಲಿ ರಾಹುಲ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2015, 11:09 IST
Last Updated 25 ನವೆಂಬರ್ 2015, 11:09 IST

ನವದೆಹಲಿ (ಪಿಟಿಐ): ಸಂಸತ್ತಿನ ಚಳಿಗಾಲದ ಅಧಿವೇಶನ ನಾಳೆಯಿಂದ (ನವೆಂಬರ್‌ 26) ಆರಂಭಗೊಳ್ಳಲಿದೆ.  ಡಿಸೆಂಬರ್‌ 23ವರೆಗೆ ಅಧಿವೇಶನ ನಡೆಯಲಿದೆ.

ಚಳಿಗಾಲದ ಅಧಿವೇಶನದಲ್ಲಿ ಭೂಸುಧಾರಣೆ ತಿದ್ದುಪಡಿ ಮಸೂದೆ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಸೂದೆ ಸೇರಿದಂತೆ ಹಲವು ಮಸೂದೆಗಳಿಗೆ ಒಪ್ಪಿಗೆ ಪಡೆಯಲು ಸರ್ಕಾರ ಸಿದ್ಧತೆ ನಡೆಸಿದೆ. ಆದರೆ, ಈ ಎಲ್ಲ ಮಸೂದೆಗಳನ್ನು ಸದ್ಯ ದೇಶದಾದ್ಯಂತ ಭಾರಿ ಚರ್ಚೆಯಲ್ಲಿರುವ ‘ಅಸಹಿಷ್ಣುತೆ’ ವಿಚಾರ  ಬಲಿ ತೆಗೆದುಕೊಳ್ಳುವ ಸಾಧ್ಯತೆ ಇದೆ. ದಾದ್ರಿ ಘಟನೆ, ಸಂಶೋಧಕ ಕಲಬುರ್ಗಿ ಹತ್ಯೆ ಪ್ರಕರಣಗಳು ಕೂಡ ಸಂಸತ್ತಿನಲ್ಲಿ ಸದ್ದು ಮಾಡಲಿವೆ.

ಅಸಹಿಷ್ಣುತೆ ವಿಚಾರವಾಗಿ ನಟ ಅಮೀರ್‌ ಖಾನ್‌ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಬುಧವಾರ ಇಲ್ಲಿ ವೆಂಕಯ್ಯ ನಾಯ್ಡು ಅಧ್ಯಕ್ಷತೆಯಲ್ಲಿ ಸರ್ವ ಪಕ್ಷ ಸಭೆ ಸೇರಿ ಚರ್ಚೆ ನಡೆಸಿತು.

ಬೆಂಗಳೂರು ಪ್ರವಾಸದಲ್ಲಿರುವ ರಾಹುಲ್‌ ಗಾಂಧಿ, ಚಳಿಗಾಲದ ಅಧಿವೇಶನದಲ್ಲಿ ಅಸಹಿಷ್ಣುತೆ ವಿಚಾರವನ್ನೇ ಪ್ರಮುಖವಾಗಿ ಪ್ರಸ್ತಾಪಿಸಲಾಗುವುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.